ಕೋಲಾರ: ಗ್ರಾಮಾಂತರ ಪ್ರದೇಶ ಬಡ ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಸಾಧ್ಯವಾಗದೆ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದು ಮಲಬಾರ್ ಅಂತಹ ಕಂಪನಿಯು ತನ್ನ ಸಿಎಸ್ಆರ್ ಅನುದಾನವನ್ನು ವಿದ್ಯಾರ್ಥಿವೇತನದ ಮೂಲಕ ಅನುಕೂಲ ಮಾಡಿಕೊಟ್ಟಿದ್ದಾರೆ ಇದರ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ಮಲಬಾರ್ ಸಂಸ್ಥೆಯ ವತಿಯಿಂದ ಸಿಎಸ್ಆರ್ ಅನುದಾನದಡಿ ಸುಮಾರು ಜಿಲ್ಲೆಯ 721 ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ 61.66 ಲಕ್ಷ ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಿ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ಶಿಕ್ಷಣದಿಂದ ಮಾತ್ರವೇ ಸಾಧ್ಯವಾಗುತ್ತದೆ ಕೇವಲ ಆಸ್ತಿ ಮಾಡಿದರೆ ಸಾಲದು ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸಬೇಕು ಮಲಬಾರ್ ಸಂಸ್ಥೆಯ ಸಹಾಯಹಸ್ತವು ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆ ಇರಲಿ ನಿಮ್ಮ ಜೊತೆಗೆ ಸದಾ ನಾವು ಎಲ್ಲರೂ ಇರತ್ತೇವೆ ಎಂದರು.
ಜಿಲ್ಲೆಯ ಕೋಲಾರ, ಬಂಗಾರಪೇಟೆ, ಮಾಲೂರು, ಮಾಸ್ತಿ, ಮುಳಬಾಗಿಲು ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರಿಗೆ ಒಟ್ಟು 16 ಲಕ್ಷ 66 ಸಾವಿರ ವಿದ್ಯಾರ್ಥಿವೇತನ ನೀಡಿದ್ದಾರೆ. ಇದೊಂದು ಒಳ್ಳೆಯ ಕೆಲಸವಾಗಿದೆ ವಿದ್ಯಾರ್ಥಿಗಳು ಸಮಾಜದ ಆಸ್ತಿ ಏನೂ ಇಲ್ಲದ ಸಮಯದಲ್ಲಿ ಅಂಬೇಡ್ಕರ್ 54 ಪದವಿ ಮಾಡಿದ್ದರು. ಈಗ ಎಲ್ಲಾ ಸೌಲಭ್ಯ ಇರುವ ನೀವು ಕನಿಷ್ಠ 10 ಡಿಗ್ರಿಯಾದರೂ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಎಲ್ಲವನ್ನೂ ಸರ್ಕಾರದಿಂದ ನಿರೀಕ್ಷಿಸಲು ಆಗುವುದಿಲ್ಲ ಖಾಸಗಿ ಕಂಪನಿಗಳ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ ಹೆಣ್ಣು ಮಕ್ಕಳು ಸಹ ಎಲ್ಲಾ ವಿಭಾಗದಲ್ಲಿ ನಿಭಾಯಿಸುವ ಶಕ್ತಿ ಮತ್ತು ಅವಕಾಶಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಸರ್ಕಾರವು ರಾಜಕೀಯದಲ್ಲಿ ಸಹ ಮಹಿಳಾ ಮೀಸಲಾತಿ ಜಾರಿ ಮಾಡಿದ್ದು ಮುಂದೆ ಜಾರಿಯಾಗಲಿದೆ ಗುರಿ ಮತ್ತು ಯಶಸ್ಸು ನಿಮ್ಮ ಅಧ್ಯತೆಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಮಲಬಾರ್ ಜೋನಲ್ ಮುಖ್ಯಸ್ಥ ಶರಿಪುದ್ದೀನ್ ಮಹಿಳಾ ಸಬಲೀಕರಣ ಉದ್ದೇಶದಿಂದ ಸರ್ಕಾರಿ ಕಾಲೇಜು ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿವೇತನ ನೀಡುತ್ತಿದ್ದೇವೆ. ದೇಶದ 21 ಸಾವಿರ ಮಕ್ಕಳಿಗೆ ರಾಜ್ಯದ 5.501 ಮಕ್ಕಳಿಗೆ ಸೌಲಭ್ಯಗಳನ್ನು ನೀಡಲಾಗಿದೆ. ಕೋಲಾರ ಜಿಲ್ಲೆಯ 25 ಕಾಲೇಜುಗಳ 724 ಮಕ್ಕಳಿಗೆ 16 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಿದ್ದೇವೆ. ಆದಾಯದ ಶೇ 5ರಷ್ಟು ಹಣ ಸಿಎಸ್ಆರ್ ಅನುದಾನದಲ್ಲಿ ನೀಡಲಾಗಿದೆ ಸಂಸ್ಥೆಯು ಶಿಕ್ಷಣ ಜೊತೆಗೆ ಹಸಿವು ಮುಕ್ತ ಭಾರತ, ಅಜ್ಜಿಮನೆ, ಮಾನವೀಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು,
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಬಾಲಕೃಷ್ಣ, ಬಂಗಾರಪೇಟೆ ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ, ಮಲಬಾರ್ ಸಂಸ್ಥೆಯ ಅಲ್ತಾಫ್, ಸಾಧಿಕ್ ಮುಂತಾದವರು ಇದ್ದರು.
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…