ಸಿಡಿಲು ಬಡಿದು 16 ಕುರಿಗಳು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಅಕ್ಕಲೇಮಲ್ಲೇನಹಳ್ಳಿ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಬಳಿಯ ರತ್ನಗಿರಿ ನಿವಾಸಿ ಕಿಟ್ಟಣ್ಣ ಎಂಬುವವರಿಗೆ ಸೇರಿದ ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಮರದ ಕೆಳಗಿ ನಿಂತಿದ್ದಾಗ ಸಿಡಿಲು ಬಡಿದಿದ್ದರಿಂದ ಕುರಿಗಳ ಮಾರಣಹೋಮ ನಡೆದಿದೆ.
ರತ್ನಗಿರಿಯಿಂದ 180 ಕುರಿಗಳೊಂದಿಗೆ ಕುರಿಗಳನ್ನು ಮೇಯಿಸಲು ಅಕ್ಕಲೇಮಲ್ಲೇನಹಳ್ಳಿಗೆ ಕುರಿಗಾಹಿಗಳು ಬಂದಿದ್ದರು.
ಸ್ವಲ್ಪ ಎಚ್ಚರ ತಪ್ಪಿದ್ದರೆ ಕುರಿಗಾಹಿಗಳು ಸಹ ಸಿಡಿಲಿಗೆ ಬಲಿಯಾಗುತ್ತಿದ್ದರು. ಅದೃಷ್ಟವಶಾತ್ ಕುರಿಗಾಹಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಕುರಿಗಳನ್ನು ಕಳೆದುಕೊಂಡ ಕುರಿಗಾಹಿಗಳು ಕಂಗಾಲಾಗಿದ್ದಾರೆ.
ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…