Categories: ಕೋಲಾರ

ಸಿದ್ದರಾಮಯ್ಯಗೆ ನ್ಯಾಯಾಲಯ ಮೇಲೆ ಗೌರವ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ-ಓಂಶಕ್ತಿ ಚಲಪತಿ ಒತ್ತಾಯ

ಕೋಲಾರ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿದೆ. ಕಾನೂನಿಗೆ ಗೌರವ ಕೊಟ್ಟು ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕಾರದಿಂದ ದೂರ ಇದ್ದು ತನಿಖೆಗೆ ಸಹಕರಿಸಬೇಕು ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಕುರುಬ ಸಮಾಜದ ಮುಖಂಡ ಓಂಶಕ್ತಿ ಚಲಪತಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಯಾವುದೇ ತಪ್ಪು ಮಾಡಿಯೇ ಇಲ್ಲ ಎಂದು ಸಿದ್ಧರಾಮಯ್ಯ ನವರೇ ಹೇಳುತ್ತಿದ್ದಾರೆ ಆದರೆ ಅವರು ನ್ಯಾಯಾಲಯದ ಆದೇಶಕ್ಕೆ ಗೌರವ ಕೊಡಬೇಕು ಕುರುಬ ಸಮಾಜದ ಪ್ರಭಾವಿ ಮುಖಂಡರಾಗಿದ್ದು ಎಷ್ಟೇ ಕಳಂಕರಹಿತರಾಗಿದ್ದರೂ ಸಮುದಾಯದ ಹಿತದೃಷ್ಟಿಯಿಂದ ರಾಜೀನಾಮೆ ಕೊಟ್ಟು ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದ ಬಳಿಕ ಮತ್ತೆ ಮುಖ್ಯಮಂತ್ರಿಯಾಗಿ ಬರಲಿ ಎಂದರು.

ಮುಡಾ ಹಗರಣದಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ ಜೊತೆಗೆ ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಲಾಗಿದೆ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ವಿರುದ್ದ ಎಫ್‌ಐಆರ್‌ ದಾಖಲಿಸಿ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ತಮ್ಮ ಸ್ಥಾನದಲ್ಲಿ ಇದ್ದಾಗ ಯಾವುದೇ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಾಧ್ಯವಿಲ್ಲ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.

ಹಿಂದೆ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಭ್ರಷ್ಟಾಚಾರದ ಆರೋಪ ಬಂದಾಗ ವಿರೋಧ ಪಕ್ಷದಲ್ಲಿ ಇದ್ದ ಸಿದ್ದರಾಮಯ್ಯ ನವರು ರಾಜೀನಾಮೆಗೆ ಒತ್ತಾಯಿಸಿದ್ದರು ಆದರೆ ಇವತ್ತು ಅಂತಹುದೇ ಪರಿಸ್ಥಿತಿ ಸಿದ್ದರಾಮಯ್ಯ ಮೇಲೆ ಬಂದಿದೆ ನೈತಿಕತೆಯಿಂದ ಎಲ್ಲರನ್ನೂ ಪ್ರಶ್ನೆ ಮಾಡುವ ಸಿದ್ದರಾಮಯ್ಯ ಅವರು ಅದೇ ನೈತಿಕತೆಯನ್ನು ಉಳಿಸಿಕೊಳ್ಳಬೇಕಾದರೆ ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಅವರು ಸಂವಿಧಾನದ ಬಗ್ಗೆ ಉದ್ದುದ್ದವಾದ ಭಾಷಣದ ಜೊತೆಗೆ ನೈತಿಕತೆಯ ಪಾಠ ಮಾಡತ್ತಾರೆ ತಮ್ಮ ಮೇಲೆ ಬಂದಿರುವ ಕಳಂಕವನ್ನು ತೊಡೆದುಹಾಕಲು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಓಂಶಕ್ತಿ ಚಲಪತಿ ಒತ್ತಾಯಿಸಿದರು.

Ramesh Babu

Journalist

Recent Posts

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

2 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

15 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

17 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

20 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

23 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

24 hours ago