ಸಿದ್ದರಾಮಯ್ಯಗೆ ಸಿಎಂ ಪಟ್ಟಾಭಿಷೇಕ?:ನಾಳೆ‌ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ?

ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಯಾರು ಎಂಬ ಗೊಂದಲಕ್ಕೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿ ‘ಕೈ’ ಹೈಕಮಾಂಡ್ ತೆರೆ ಎಳೆದಿದ್ದಾರೆ. ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ?.

ನೂತನವಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಿದ ನಂತರ ನಾಳೆ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಸಿಎಂ ಸ್ಥಾನಕ್ಕೆ ಪ್ರಬಲ ಪೈಪೋಟಿ ನೀಡಿದ್ದ ಡಿ.ಕೆ.ಶಿ ಹೈಕಮಾಂಡ್ ಮನವೊಲಿಕೆ ನಂತರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಕೊಂಡಿದ್ದು ಅದರ ಜೊತೆಗೆ ಇನ್ನೆರಡು ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿಯೂ ಡಿಕೆಶಿ ಮುಂದುವರಿಯಲಿದ್ದಾರೆ.

ಎಲ್ಲ 135 ಕಾಂಗ್ರೆಸ್ ಶಾಸಕರ ಸಭೆ ನಾಳೆ ನಡೆಯುವ ನಿರೀಕ್ಷೆಯಿದೆ. ಅದರಲ್ಲಿ ಯಾರ್ಯಾರು ಸಚಿವರಾಗಲಿದ್ದಾರೆ, ಯಾರ್ಯಾರಿಗೆ ಯಾವ ಖಾತೆ ಹಂಚಿಕೆ ಎಂಬುದರ ಬಗ್ಗೆ ಚರ್ಚೆಯಾಗಿ ಮುಂದಿನ ವಾರವೇ ಸಚಿವ ಸಂಪುಟ ರಚನೆಯಾಗಲಿದೆ ಎಂಬ ಮಾಹಿತಿಗಳು ಸಹ ಲಭ್ಯವಾಗಿವೆ.

Leave a Reply

Your email address will not be published. Required fields are marked *