ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ ಚರ್ಚೆ ಬರೀ ಮಾಧ್ಯಮಗಳ ಸೃಷ್ಟಿ ಅಷ್ಟೇ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ಮಾರ್ಗದರ್ಶನ ಅವಶ್ಯಕತೆ ಇದೆ ಜೊತೆಗೆ 2025ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ, ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ, ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿ ಕೆಲಸ ಮಾಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗಿವುದಿಲ್ಲ ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ, ಪಕ್ಷ ಬೇರೆ, ಸರ್ಕಾರ ಬೇರೆ. ಮಲ್ಲಿಕಾರ್ಜುನ ಖರ್ಗೆಯವರರು ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನಿಸಿದಾಗ ನನಗೆ ಗೊತ್ತಿಲ್ಲ, ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ, ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಕ್ಕೆ ಸಿದ್ದನಾಗಿದ್ದಾನೆ, ಮಂತ್ರಿಗಿರಿ ಇರಲಿ, ಬಿಡಲಿ, ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ ಎಂದರು.
ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು, ಇವತ್ತು ಜನ ನಂಬಿ ನನಗೆ ಮತ ಹಾಕಿದ್ದಾರೆ, ಅವರ ಋಣ ತೀರಿಸುವೆ ಕೆಲಸ ಮಾಡುವೆ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ, ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲವೆಂದು ನುಣಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದರು.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…