ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.
ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದಿದ್ದಾರೆ.
ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!! ಎಂದು ಗುಡುಗಿದ್ದಾರೆ.
ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ.. ಎಂದು ಆಗ್ರಹಿಸಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…