ಸಿಪಿಐಎಂ ನಗರ ಸಮ್ಮೇಳನ: ಕಾರ್ಪೊರೇಟ್ ಸಂಸ್ಥೆಗಳ ಪರವಾದ ಸರ್ಕಾರಗಳು- ಟಿ.ಎಂ.ವೆಂಕಟೇಶ್

ಕೋಲಾರ: ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಗಳೆರಡೂ ಇದ್ದು ಸಾಮಾನ್ಯ ಜನರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ಪಕ್ಷದ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಆರೋಪಿಸಿದರು.

ನಗರದ ಪಾಲಸಂದ್ರ ಲೇಔಟ್ ನಲ್ಲಿರುವ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ಮಂಗಳವಾರ ಭಾರತ ಕಮ್ಯುನಿಷ್ಟ್‌ (ಮಾರ್ಕ್ಸ್‌ವಾದಿ) ಪಕ್ಷದ ನಗರ ಸಮ್ಮೇಳನದ ಭಾಗವಾಗಿ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೊಳಿಸುತ್ತಿದೆ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ, ಕೇಂದ್ರ ಸರ್ಕಾರವು ಈ ಬಗ್ಗೆ ಯಾವುದೇ ಚಿಂತೆಯಿಲ್ಲದಂತೆ ವರ್ತಿಸುತ್ತಿದೆ ಇನ್ನೂ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದಲ್ಲಿ ಜನರನ್ನು ಮರೆತಿದ್ದಾರೆ ಎಂದರು.

ಕೋಲಾರ ಜಿಲ್ಲೆಗೆ ಶಾಶ್ವತವಾದ ನೀರಾವರಿ ಯೋಜನೆಗಳು ಜಾರಿಯಾಗಬೇಕು, ಕೆ.ಸಿ ವ್ಯಾಲಿಗೆ ಮೂರನೇ ಹಂತದ ಶುದ್ದೀಕರಣ, ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದಿಗೆ ಕೈಗೊಂಡಿರುವ ನಿರ್ಣಯಗಳನ್ನು ಜಾರಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಸಿಪಿಐಎಂ ಪಕ್ಷವನ್ನು ಬಲಪಡಿಸಿ ಜನಪರವಾದ ಹೋರಾಟಗಳನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ ಎಂದರು.

ಪಕ್ಷದ ತಾಲೂಕು ಸಮಿತಿ ಸದಸ್ಯೆ ಆಶಾ ಮಾತನಾಡಿ ಜನರಿಗೆ ಹುಸಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಜನತೆಯ ಆಶಯಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಜೊತೆಗೆ ಭ್ರಷ್ಟಾಚಾರ ಮಿತಿ ಮೀರಿದ್ದು, ಜನ ಸಾಮಾನ್ಯರು ಪರದಾಡುವಂತೆ ಮಾಡಿದ್ದಾರೆ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಎಂ.ಭೀಮರಾಜ್ ಅವರನ್ನು ಮುಂದಿನ ಅವಧಿಗೆ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಮುಖಂಡರಾದ ಭೀರಮಾನಹಳ್ಳಿ ರಮೇಶ್, ಮುಸ್ತಫಾ, ನಾಗರಾಜ್, ನಾರಾಯಣಪ್ಪ, ಶಾರದಮ್ಮ, ರಾಮಚಂದ್ರಪ್ಪ ಮುಂತಾದವರು ಇದ್ದರು,

Leave a Reply

Your email address will not be published. Required fields are marked *