ಕೋಲಾರ: ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಗಳೆರಡೂ ಇದ್ದು ಸಾಮಾನ್ಯ ಜನರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ಪಕ್ಷದ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಆರೋಪಿಸಿದರು.
ನಗರದ ಪಾಲಸಂದ್ರ ಲೇಔಟ್ ನಲ್ಲಿರುವ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ಮಂಗಳವಾರ ಭಾರತ ಕಮ್ಯುನಿಷ್ಟ್ (ಮಾರ್ಕ್ಸ್‌ವಾದಿ) ಪಕ್ಷದ ನಗರ ಸಮ್ಮೇಳನದ ಭಾಗವಾಗಿ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೊಳಿಸುತ್ತಿದೆ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ, ಕೇಂದ್ರ ಸರ್ಕಾರವು ಈ ಬಗ್ಗೆ ಯಾವುದೇ ಚಿಂತೆಯಿಲ್ಲದಂತೆ ವರ್ತಿಸುತ್ತಿದೆ ಇನ್ನೂ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದಲ್ಲಿ ಜನರನ್ನು ಮರೆತಿದ್ದಾರೆ ಎಂದರು.
ಕೋಲಾರ ಜಿಲ್ಲೆಗೆ ಶಾಶ್ವತವಾದ ನೀರಾವರಿ ಯೋಜನೆಗಳು ಜಾರಿಯಾಗಬೇಕು, ಕೆ.ಸಿ ವ್ಯಾಲಿಗೆ ಮೂರನೇ ಹಂತದ ಶುದ್ದೀಕರಣ, ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದಿಗೆ ಕೈಗೊಂಡಿರುವ ನಿರ್ಣಯಗಳನ್ನು ಜಾರಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಸಿಪಿಐಎಂ ಪಕ್ಷವನ್ನು ಬಲಪಡಿಸಿ ಜನಪರವಾದ ಹೋರಾಟಗಳನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ ಎಂದರು.
ಪಕ್ಷದ ತಾಲೂಕು ಸಮಿತಿ ಸದಸ್ಯೆ ಆಶಾ ಮಾತನಾಡಿ ಜನರಿಗೆ ಹುಸಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಜನತೆಯ ಆಶಯಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಜೊತೆಗೆ ಭ್ರಷ್ಟಾಚಾರ ಮಿತಿ ಮೀರಿದ್ದು, ಜನ ಸಾಮಾನ್ಯರು ಪರದಾಡುವಂತೆ ಮಾಡಿದ್ದಾರೆ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.
ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಎಂ.ಭೀಮರಾಜ್ ಅವರನ್ನು ಮುಂದಿನ ಅವಧಿಗೆ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಮುಖಂಡರಾದ ಭೀರಮಾನಹಳ್ಳಿ ರಮೇಶ್, ಮುಸ್ತಫಾ, ನಾಗರಾಜ್, ನಾರಾಯಣಪ್ಪ, ಶಾರದಮ್ಮ, ರಾಮಚಂದ್ರಪ್ಪ ಮುಂತಾದವರು ಇದ್ದರು,
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…