Categories: ಕೋಲಾರ

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಜಿ.ಸಿ ಬಯ್ಯಾರೆಡ್ಡಿಗೆ ನುಡಿನಮನ

ಕೋಲಾರ: ಜನರಿಗೆ ಸಮಾಜದಲ್ಲಿನ ಸಮಸ್ಯೆಗಳ ಬಗ್ಗೆ ಆಕ್ರೋಶವಿದ್ದರೂ ಅವುಗಳನ್ನು ಬಳಸಿಕೊಂಡು ಹೋರಾಟ ರೂಪಿಸಲು ಜನಪ್ರತಿನಿಧಿಗಳು ಸೇರಿದಂತೆ ಸಂಘಸಂಸ್ಥೆಗಳು ವಿಫಲವಾಗಿದ್ದಾರೆ. ವೇದಿಕೆಗಳಲ್ಲಿ ಇದ್ದವರು ಜಾಣತನ ಹೆಚ್ಚಾಗಿ ಬದ್ದತೆಯ ಅರ್ಥವೇ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಷಾದಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ರೈತ ಮುಖಂಡ ಹಾಗೂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ ಬಯ್ಯಾರೆಡ್ಡಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರ ಆಕ್ರೋಶದ ನೈಜತೆಯ ಬಗ್ಗೆ ಯಾವುದೇ ವ್ಯಕ್ತಿಯಾಗಲಿ ಪಕ್ಷವಾಗಲಿ ಸಹಾಯ ಮಾಡಲು ಮುಂದಾಗುತ್ತಿಲ್ಲ. ಜನತೆಯ ಅಸಹಾಯಕತೆಯನ್ನು ತಣ್ಣಗಾಗಿಸುವ ನೈಪುಣ್ಯತೆಯನ್ನು ಗೊತ್ತಿದ್ದರೂ ಮುಂದಾಗುವವರ ಸಂಖ್ಯೆ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಮಾರು 60 ರ ದಶಕದಲ್ಲಿ ಬೆಂಗಳೂರು ಅಂತಹ ಪ್ರದೇಶದಲ್ಲಿ ಸೈಕಲ್ ಗೆ 25 ಪೈಸೆ ತೆರಿಗೆ ಹಾಕಿದಾಗ ಎಲ್ಲಾ ರಾಜಕೀಯ ಪಕ್ಷಗಳು ಬೀದಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದ್ದರು. ಇವತ್ತು ಜನರ ಸೇವೆ ಹೆಸರಿನಲ್ಲಿ ದರೋಡೆ ಮಾಡುವವರ ವಿರುದ್ದ ಯಾವುದೇ ಆಕ್ರೋಶದ ಧ್ವನಿಯಿಲ್ಲವಾಗಿದೆ ಎಂದರು.

ಕಮ್ಯೂನಿಸ್ಟ್‌ ಚಳುವಳಿಯ ಕಟ್ಟಾಳುಗಳು ನಿರಂತರವಾಗಿ ಅಧ್ಯಯನ ಶೀಲರಾಗಿರುತ್ತಾರೆ. ಅದರಿಂದಲೇ ಅವರು ಮಾತಾಡುವ ಶೈಲಿ ವಿಭಿನ್ನವಾಗಿರುತ್ತದೆ. ಪ್ರತಿಯೊಂದು ಹಂತದಲ್ಲೂ ಜನಪರವಾದ ವಿಚಾರಗಳನ್ನು ಮೈಗೂಡಿಸಿಕೊಂಡು ಹೋಗುತ್ತಾರೆ. ಇವತ್ತಿನ ಕಲುಷಿತ ವಾತಾವರಣದ ರಾಜಕೀಯ ವ್ಯವಸ್ಥೆಯಲ್ಲಿ ನೈಜತೆಯ ರಾಜಕಾರಣ ಮುಖ್ಯವಾಗಿದೆ. ಜನಪರ ಹೋರಾಟಕ್ಕೆ ಜಯ ಸಿಗುತ್ತದೆ. ನಿಮ್ಮ ಜನಮುಖಿ ಸಮಾಜಮುಖಿ ಕಾರ್ಯಕ್ರಮಗಳಿಗೆ ಸದಾ ಬೆಂಬಲ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಕಮ್ಯೂನಿಸ್ಟ್‌ ಚಳುವಳಿಗಳಿಂದಲ್ಲೇ ಜಿಲ್ಲೆಯ ಜನಪರ ಯೋಜನೆಗಳ ಜೊತೆಗೆ ಶಾಶ್ವತ ನೀರಾವರಿ ಯೋಜನೆಗಳ ಜಾರಿಗೆ ಕಾರಣವಾಗಿವೆ. ಬೆಲೆ ಏರಿಕೆ, ಭೂಸ್ವಾಧೀನ ವಿರುದ್ದ ಕೋಮುವಾದಿ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಕಮ್ಯೂನಿಸ್ಟ್‌ ಪಕ್ಷವು ನಿರಂತರವಾಗಿ ಹೋರಾಟ ರೂಪಿಸಿದೆ. ದೇಶದಲ್ಲಿ ಜನತಾ ಪರಿಹಾರದ ಪಕ್ಷಗಳು ಹೊಂದಾಣಿಕೆ ರಾಜಕಾರಣ ಮಾಡಿದ್ದರಿಂದ ಕೆಲವು ಕಡೆಯಲ್ಲಿ ರಾಜಕಾರಣದಿಂದ ದೂರವಾಗಿವೆ ಇದು ಬಿಜೆಪಿಗೆ ಲಾಭವಾಗಿದೆ. ಕಮ್ಯೂನಿಸ್ಟ್‌ ಇತಿಹಾಸವನ್ನು ತಿಳಿದು ಜನರನ್ನು ಎಚ್ಚರಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಮತ್ತು ಜಿ.ಸಿ‌ ಬಯ್ಯಾರೆಡ್ಡಿ ಆಡಳಿತ ಪಕ್ಷಗಳಿಗೆ ನಿರಂತರವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಮಹಿಳೆಯ, ಕಾರ್ಮಿಕರ, ರೈತರ ವಿಧ್ಯಾರ್ಥಿಗಳ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಅಂತಹವರು ನಮ್ಮಿಂದ ದೂರವಾಗಿದ್ದರಿಂದ ಚಳುವಳಿಗೆ ಹಾಗೂ ಜಿಲ್ಲೆಗೆ ತುಂಬುಲಾರದ ನಷ್ಟವಾಗಿದೆ ಅವರ ಆದರ್ಶಗಳು ನಮಗೆಲ್ಲ ಸ್ಪೂರ್ತಿಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ ಪ್ರಕಾಶ್ ಮಾತನಾಡಿ, ದೇಶದಲ್ಲಿ ಕಮ್ಯೂನಿಸ್ಟ್‌ ಪಕ್ಷದ ಕಾರ್ಯಕರ್ತರು ತತ್ವ ಸಿದ್ದಾಂತಗಳಿಗೆ ಬದ್ದರಾಗಿದ್ದಾರೆ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ ಸಂಯುಕ್ತರಂಗದ ತಂತ್ರಗಾರಿಕೆಯಿಲ್ಲದೇ ಚಳುವಳಿಗೂ ನಷ್ಟವಾಗಿದೆ ಬಯ್ಯಾರೆಡ್ಡಿ ಅಂತಹ ನಾಯಕ ಜಾತಿ ಧರ್ಮ ಪಕ್ಷ ಬಿಟ್ಟು ಸಮಾಜದ ಹಕ್ಕುಗಳಿಗಾಗಿ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಬಹುತ್ವ ಭಾರತ ಹಕ್ಕುಗಳಿಗಾಗಿ ನಾವು ಎಲ್ಲರೂ ಒಂದಾಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ರೈತ ಪರವಾದ ಹೋರಾಟಗಳು ಜಿಲ್ಲೆಯಿಂದ ಪ್ರಾರಂಭವಾಗಿ ಯಶಸ್ಸು ಗಳಿಸಲು ಸಾಧ್ಯವಾಗಿದೆ ಅದಕ್ಕಾಗಿ ತ್ಯಾಗ ಮಾಡಿದವರ ನೆನಪು ಬದುಕಿನ ದಾರಿ ನಮಗೆಲ್ಲ ಸ್ಪೂರ್ತಿಯಾಗಿದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳನ್ನು ಕೊಡಿಸುವ ಚಳುವಳಿ ಹೋರಾಟ ಇವತ್ತಿನ ಸಂದರ್ಭದಲ್ಲಿ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ವಹಿಸಿದ್ದರು ಚಳುವಳಿಗಳ ನಾಯಕ ಜಿ.ಸಿ ಬಯ್ಯಾರೆಡ್ಡಿ ಪುಸ್ತಕ ಬಿಡುಗಡೆ ಮಾಡಲಾಯಿತು ಅವರ ಮಗಳು ನಿಲೋನಾ ಮಾತನಾಡಿದರು ವೇದಿಕೆಯಲ್ಲಿ ರೈತ ಸಂಘದ ಅಬ್ಬಣಿ ಶಿವಪ್ಪ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಟಿ.ಎಂ ವೆಂಕಟೇಶ್, ವಿ.ಗೀತಾ, ಪಿ.ಶ್ರೀನಿವಾಸ್, ಎ.ಆರ್ ಬಾಬು, ಪಿ.ತಂಗರಾಜ್, ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago