ಕೋಲಾರ: ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಸಿಪಿಐಎಂನ 9ನೇ ತಾಲೂಕು ಸಮ್ಮೇಳನವು ನಗರದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು ಧ್ವಜಾರೋಹಣವನ್ನು ಪಕ್ಷದ ಹಿರಿಯ ಮುಖಂಡ ಎನ್.ಎನ್ ಶ್ರೀರಾಮ್ ನೇರವೆರಿಸಿದರು ನಂತರ ಎಲ್ಲಾ ಮುಖಂಡರು, ಸದಸ್ಯರು ಅಗಲಿದ ಸಂಗಾತಿಗಳ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಕೇಂದ್ರದ ಬಿಜೆಪಿ ಸರ್ಕಾರವು ಸಾಮಾನ್ಯ ಜನರ ವಿರೋಧಿ ನೀತಿಗಳಿಂದ ಪ್ರತಿಯೊಬ್ಬರಿಗೂ ತೊಂದರೆ ನೀಡುತ್ತಿದ್ದಾರೆ ಕಾರ್ಮಿಕರು ಮತ್ತು ರೈತರು ಈ ದೇಶದ ಆಸ್ತಿ. ಅನ್ನ ನೀಡುವ ರೈತ ಮತ್ತು ಅಗತ್ಯ ವಸ್ತು ಉತ್ಪಾದಿಸುವ ಕಾರ್ಮಿಕರಿಗೆ ಅನ್ಯಾಯ ಮಾಡಿದೆ ಶ್ರಮಿಕರು ತಮ್ಮ ಹಕ್ಕುಗಳಿಗಾಗಿ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಹೋರಾಟ ಮಾಡಬೇಕಾದ ಸಂದರ್ಭ ಬಂದಿದೆ ಎಂದರು.
ದೇಶದಲ್ಲಿ ದುಡಿಯುವ ವರ್ಗ, ಶೋಷಿತರು, ದಲಿತರು, ರೈತರು, ಅಲ್ಪಸಂಖ್ಯಾತರ, ಅಸ್ಪೃಶ್ಯರು ಇನ್ನುಳಿದ ಕಾರ್ಮಿಕ ವರ್ಗ ಒಗ್ಗೂಡಬೇಕು. ಆಗ ಮಾತ್ರ ಆಳುವ ವರ್ಗ ಅಥವಾ ಬಂಡವಾಳಶಾಹಿಗಳಿಗೆ ಉತ್ತೇಜನ ನೀಡುವವರಿಗೆ ದಿಟ್ಟ ಉತ್ತರ ಕೊಡಲು ಸಾಧ್ಯವಾಗುತ್ತದೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜನಪ್ರತಿನಿಧಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಶ್ರೀನಿವಾಸ್ ಮಾತನಾಡಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕೋವಿಡ್ ಸಂದರ್ಭದಲ್ಲಿ ಬಡವರ ರಕ್ಷಿಸಲು ಮುಂದಾಗದೆ, ಬಂಡವಾಳಶಾಹಿಗಳಿಗೆ ನೆರವು ನೀಡುವಲ್ಲಿ ಕಾಲವ್ಯಯ ಮಾಡಿದೆ. ಒಂದರ್ಥದಲ್ಲಿ ಬಡವರ್ಗದ ಸರ್ವನಾಶಕ್ಕೆ ಮುಂದಾಗಿರುವ ಮೋದಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ, ಇಂಧನ ಬೆಲೆ ಏರಿಕೆ, ಕೃಷಿ ಸವಲತ್ತು ಬೆಲೆ ಗಗನಕ್ಕೇರಿಸುವುದಲ್ಲೇ ಕಾಲ ಕಳೆದಿದೆ. ಸಾರ್ವಜನಿಕ ರಂಗದ ಶಿಕ್ಷಣ ಸಂಸ್ಥೆ ಸೇರಿದಂತೆ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ ಎಂದು ಆರೋಪಿಸಿದರು.
ಸಮ್ಮೇಳನದಲ್ಲಿ ಮೂರು ವರ್ಷಗಳ ಚಟುವಟಿಕೆಗಳನ್ನು ವಿಮರ್ಶಿಸಿ ನಂತರ ನೂತನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಅವರನ್ನು ಮರು ಆಯ್ಕೆ ಮಾಡಲಾಯಿತು.
ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಗಂಗಮ್ಮ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…