ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಗೋದಿ ಮಿಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಿಮೆಂಟ್ ಲಾರಿ ಹಾಗೂ ಕಂಟೇನರ್ ನಡುವೆ ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿದ್ದು, ಸಿಮೆಂಟ್ ಲಾರಿಯಲ್ಲಿದ್ದ ಸಿಮೆಂಟ್ ಮೂಟೆಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಮೆಂಟ್ ಮೂಟೆಗಳು ರಸ್ತೆಯಲ್ಲಿ ಬಿದ್ದಿದ್ದರಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿ, ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಸ್ಥಳಕ್ಕೆ ಆಗಮಿಸಿದ ದೊಡ್ಡಬೆಳವಂಗಲ ಠಾಣೆ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಾಲೆಗೆ ಹೋಗುವ ದಾರಿ, ಅಂಗನವಾಡಿಯ ಅಂಗಳ, ಆಟವಾಡುವ ಮೈದಾನ... ಹೀಗೆ ಮಕ್ಕಳ ಸುರಕ್ಷಿತ ಬಾಲ್ಯ ಕಳೆಯಬೇಕಾದ ಜಾಗಗಳಲ್ಲೇ…
ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣಿನಡಿ ಹುದುಗಿಹೋಗುವ ಅಪಾಯದಲ್ಲಿದ್ದ ವಿಜಯನಗರ ಅರಸರ ಕಾಲದ ಆರು ಐತಿಹಾಸಿಕ ವೀರಗಲ್ಲುಗಳನ್ನು ಪುರಾತತ್ವ…
ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು…
ದೊಡ್ಡಬಳ್ಳಾಪುರ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಟೊಮೆಟೊ ದರ ಕುಸಿತವೂ ರೈತರನ್ನು ಕಂಗಾಲಾಗಿಸಿದೆ. ಬೆಳೆ…
ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿ 130 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯೊಬ್ಬ, ಮನೆ ಮಾಲೀಕನ…