ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ, ಪೂರಕವಾದ ಆಹಾರ ಹಾಗೂ ಗುಣಮಟ್ಟದ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಕೃಷಿ ಇಲಾಖೆ ವತಿಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಹಬ್ಬ ಮತ್ತು ಕಿಸಾನ್ ಮೇಳ-2024 ಕಾರ್ಯಕ್ರಮವನ್ನು ಉಧ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಜನರು ಫಾಸ್ಟ್ ಫುಡ್ ಮೊರೆ ಹೋಗುತ್ತಿದ್ದಾರೆ. ಇದರಿಂದ ಆರೋಗ್ಯ ಕೆಡುತ್ತಿದೆ. ನಾವು ತಿನ್ನುವ ಆಹಾರ ಗುಣಮಟ್ಟದಾಗಿರಬೇಕು. ಸಿರಿಧಾನ್ಯಗಳು ಹೆಚ್ಚು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ನಮ್ಮ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.
ಚಿಕ್ಕಬಳ್ಳಾಪುರ ಲೋಕಸಭಾ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಮಾತನಾಡಿ, ಸಿರಿಧಾನ್ಯಗಳನ್ನು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ, ಲಾಭದಾಯಕ ಬೆಳೆಗಳ ಬಗ್ಗೆ ರೈತರು ಹೆಚ್ಚಿನ ಗಮನವಹಿಸುತ್ತಾರೆ, ಸರ್ಕಾರದಿಂದ ವಿವಿಧ ಯೋಜನೆಗಳ ಮೂಲಕ ಮಾಹಿತಿ ನೀಡಿ ಸಿರಿಧಾನ್ಯಗಳಗಳನ್ನು ಬೆಳೆಯಲು ಪ್ರೋತ್ಸಾಹಿಸಿ ಬೆಂಬಲಿಸಬೇಕು ಎಂದು ಹೇಳಿದರು.
ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೃಷಿ ಇಲಾಖೆ ವತಿಯಿಂದ ನೀಡಲಾಯಿತು, ವಿವಿಧ ತಳಿಯ ಕೃಷಿ ಉತ್ಪನ್ನಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…