ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ವಿವರಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪ್ರಸ್ತುತ ಚಾಲ್ತಿಯಲ್ಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-07-2026 ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 04-07-2026 ಎಂದು ನಿಗದಿ ಪಡಿಸಲಾಗಿತ್ತು. ತಾಂತ್ರಿಕ ಸಮಸ್ಯೆಗಳು, ಪ್ರಮಾಣ ಪತ್ರಗಳನ್ನು ಪಡೆಯಲು ವಿಳಂಬ ಹಾಗೂ ಇತರೆ ಅನೇಕ ಕಾರಣಗಳಿಂದ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಹಾಗೂ ಈಗಾಗಲೇ ಸಲ್ಲಿಸಿದ ಅರ್ಜಿಗಳಲ್ಲಿ ತಪ್ಪಾದ ಮಾಹಿತಿಗಳನ್ನು ನಮೂದಿಸಿದ ಹಿನ್ನಲೆಯಲ್ಲಿ, ಅರ್ಜಿಗಳಲ್ಲಿನ ವಿವರಗಳನ್ನು ತಿದ್ದುಪಡಿ ಮಾಡಲು ಅವಕಾಶ ನೀಡಬೇಕು ಎಂದು ಕೆಲವು ಅಭ್ಯರ್ಥಿಗಳು ಮನವಿ ಮಾಡಿದ್ದರು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸಿರುವ ಯುವಕರ ಭವಿಷ್ಯದ ದೃಷ್ಟಿಯಿಂದ, ಅರ್ಹ ಅಭ್ಯರ್ಥಿಗಳು ಅವಕಾಶದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಅಭ್ಯರ್ಥಿಗಳ ಅನುಕೂಲತೆಗಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಇರುವ ಕೊನೆಯ ದಿನಾಂಕವನ್ನು 08 ಜುಲೈ, 2026ರ ಸಂಜೆ 4.00 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ತಿದ್ದುಪಡಿ ಮಾಡಲು 09 ಜುಲೈ, 2026 ರಿಂದ 12 ಜುಲೈ, 2026 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 3,395 ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ 596 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಯೋಗದಲ್ಲಿ ನೇಮಕಾತಿ ನಡೆಸಲಾಗುತ್ತಿದೆ. ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಈಗಾಗಲೇ 2,80,216 ಅರ್ಜಿಗಳು ಮತ್ತು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ 59,309 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದು ರಾಜ್ಯದ ಯುವಜನರಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಉತ್ಸಾಹ ಹೆಚ್ಚಿರುವುದನ್ನು ಹಾಗೂ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಮೇಲೆ ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಅರ್ಹ ಅಭ್ಯರ್ಥಿಗಳಿಗೆ ನ್ಯಾಯಸಮ್ಮತ ಅವಕಾಶ ದೊರಕುವಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯುವಜನರು ಯಾವುದೇ ಆತಂಕವಿಲ್ಲದೆ ನಿಗದಿತ ಅವಧಿಯೊಳಗೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ನೀಡಲಾಗಿರುವ ತಿದ್ದುಪಡಿ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಪಡೆ ಅತ್ಯಂತ ಪ್ರಮುಖ ಪಾತ್ರವಹಿಸುತ್ತಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸಾಮರ್ಥ್ಯಯುತ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ. ರಾಜ್ಯದ ಎಲ್ಲ ಅರ್ಹ ಯುವಜನತೆಗೆ ಅವರ ಆಸಕ್ತಿ, ಪ್ರತಿಭೆ ಹಾಗೂ ಅರ್ಹತೆಗೆ ತಕ್ಕಂತೆ ಉದ್ಯೋಗ ದೊರಕಬೇಕು ಎನ್ನುವುದು ಗ್ಯಾರಂಟಿ ಸರ್ಕಾರದ ಆಶಯವಾಗಿದೆ ಎಂದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…