ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಸಿ.ಸಿ.ಟಿ.ವಿ ಅಳವಡಿಕೆ ಮತ್ತು ರಿಪೇರಿ ಉಚಿತ ತರಬೇತಿಯು 18 ಅಕ್ಟೋಬರ್ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 8884554510, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ನಿರ್ದೇಶಕರಾದ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…