ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ಉಚಿತ ತರಬೇತಿಗೆ ಆಸಕ್ತರು ಅರ್ಜಿ ಸಲ್ಲಿಸಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಸಿ.ಸಿ.ಟಿ.ವಿ ಅಳವಡಿಕೆ ಮತ್ತು ರಿಪೇರಿ ಉಚಿತ ತರಬೇತಿಯು 18 ಅಕ್ಟೋಬರ್ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್‌ ಕಾರ್ಡ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ 8884554510, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆ ನಿರ್ದೇಶಕರಾದ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…

46 minutes ago

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…

3 hours ago

ಬರ ಘೋಷಣೆ ಬಳಿಕ ಸಿಎಂಗೆ ಮನವಿ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನಡೆಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತರಾಟೆ

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…

6 hours ago

ದೊಡ್ಡಬಳ್ಳಾಪುರ ಬರ ಘೋಷಣೆಗೆ ಕ್ರೆಡಿಟ್ ಫೈಟ್: ಸರ್ಕಾರ ಈಗಾಗಲೇ ಬರ ಘೋಷಿಸಿದೆ; ಮತ್ತೆ ಮನವಿ ಏಕೆ?: ವೆಂಕಟರಮಣಯ್ಯಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತಿರುಗೇಟು

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…

6 hours ago

ದೇವನಹಳ್ಳಿ–ದೊಡ್ಡಬಳ್ಳಾಪುರದ ಹಲವು ಗ್ರಾಮಗಳ ಮೇಲೆ KIADB ಕಣ್ಣು: ಕೃಷಿ ಭೂಮಿ ಉಳಿಸಿಕೊಳ್ಳಲು ಮತ್ತೆ ಹೋರಾಟದ ಸದ್ದು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಕೃಷಿ ಭೂಮಿಯ ಮೇಲೆ ಮತ್ತೊಮ್ಮೆ ಭೂಸ್ವಾಧೀನದ ಆತಂಕ ಆವರಿಸಿದೆ. ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕುಗಳ ವ್ಯಾಪ್ತಿಯಲ್ಲಿ…

8 hours ago

ಶಾಸಕ ಧೀರಜ್ ವಿರುದ್ಧ ವೈಯಕ್ತಿಕ ಟೀಕೆ ಸಲ್ಲದು: ಮಾಜಿ ಶಾಸಕರು ಹಾಗೂ ಬೆಂಬಲಿಗರ ಹೇಳಿಕೆಗಳಿಗೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್ ಆಕ್ಷೇಪ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕರು ಹಾಗೂ ಅವರ ಬೆಂಬಲಿಗರು ವೈಯಕ್ತಿಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು…

1 day ago