ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಯನ್ನು ನವೆಂಬರ್ 17 ರಿಂದ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನವೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9241482541, 8884554510, 9113880324 9740982585 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…