ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್‌ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್‌ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಯನ್ನು ನವೆಂಬರ್‌ 17 ರಿಂದ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನವೆಂಬರ್‌ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ನವೆಂಬರ್‌ 15 ಕೊನೆಯ ದಿನವಾಗಿದೆ. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9241482541, 8884554510, 9113880324 9740982585 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

16 minutes ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

3 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

4 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

4 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

8 hours ago