ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್‌ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್‌ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಮೇ 23 ಕೊನೆಯ ದಿನವಾಗಿದೆ.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಜೆ.ಆನಂದ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುಮಾರು 8.38 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆ ನಡೆಸಿ, ಥಾಯ್ಲೆಂಡ್‌, ಬ್ಯಾಂಕಾಕ್‌ನಿಂದ…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ:ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.95.94 ರಷ್ಟು ಮತದಾನ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದಿದ್ದು, ಶೇಕಡ…

5 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಗೆಲುವಿನ ವಿಶ್ವಾಸ: ಕೆಸ್ತೂರು ರಮೇಶ್

ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್ ಸ್ಪರ್ಧಿಸಿದ್ದು, ಅವರ ಪರವಾಗಿ ಎನ್‌ಡಿಎ ನಾಯಕರು, ಮುಖಂಡರು…

8 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ-2026 *ಮಧ್ಯಾಹ್ನ 12 ಗಂಟೆಯವಗೆ ಶೇ. 41.16 ರಷ್ಟು ಮತದಾನ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಕಾರ್ಯವು ಜಿಲ್ಲೆಯ 06 ಮತಗಟ್ಟೆಗಳಲ್ಲಿ ಸುಗಮವಾಗಿ ನಡೆಯುತ್ತಿದ್ದು ಅಪರಾಹ್ನ 12 ಗಂಟೆಯವರೆಗೆ ಶೇ.…

10 hours ago

ತೂಬಗೆರೆ ಸುತ್ತಾಮುತ್ತ ಭೂಕಂಪ ಅನುಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಘುಮೇನಹಳ್ಳಿ ಸೇರಿದಂತೆ ತೂಬಗೆರೆ ಸುತ್ತಮುತ್ತಲಿನ ಕೆಲ ಪ್ರದೇಶದಲ್ಲಿ ಶುಕ್ರವಾರ (ಅ.23) ಬೆಳಿಗ್ಗೆ ಸುಮಾರು…

11 hours ago

ಗ್ರಾಮಾಂತರ ಜಿಲ್ಲೆಯ 13 ಕೆರೆಗಳಿಗೆ ಜಲಭಾಗ್ಯ!

ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಬರದ ತೀವ್ರತೆ, ಅಂತರ್ಜಲ ಮಟ್ಟ ಕುಸಿತ ಹಾಗೂ ಕುಡಿಯುವ ನೀರಿನ ಕೊರತೆಯಿಂದ ತತ್ತರಿಸುತ್ತಿರುವ ಬೆಂಗಳೂರು ಗ್ರಾಮಾಂತರ…

15 hours ago