ಕೊಡಗಿನ ಪೊನ್ನಂಪೇಟಿಯ ಹಳ್ಳಿ ಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ ಇ ಎ ಐ ಅಂಡ್ ಡಿ ಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್(20) ಎಂಬಾತನು ನಿನ್ನೆ ರಾತ್ರಿ ಎಂಟುವರೆ ಗಂಟೆ ಸಮಯದಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸರು ಮೃತನ ಮನೆಗೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೊನ್ನಂಪೇಟೆಯ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಮೊನ್ನೆ ರಾಯಚೂರು ಮೂಲದ ತೇಜಸ್ವಿನಿ ಎಂಬ 19 ವರ್ಷದ ವಿದ್ಯಾರ್ಥಿನಿ, ತನಗೆ ಮುಂದೆ ಓದಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಬೆನ್ನೆಲ್ಲೇ, ಇಂದು ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…