ಸಿ.ಎನ್.ಜಿ ಗ್ಯಾಸ್ ಸಿಲೆಂಡರ್ ಗಳನ್ನು ಸಾಗಿಸುತ್ತಿದ್ದ ಲಾರಿ ಹಾಗೂ ಕಲ್ಲಿನ ದಿಮ್ಮೆಗಳನ್ನು ಹೊತ್ತು ತರುತ್ತಿದ್ದ ಲಾರಿ ನಡುವೆ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಸಿಲಿಂಡರ್ ಗಳು ಹೊಡೆದು ಬೆಂಕಿ ಹೊತ್ತಿ ಉರಿದಿದೆ.
ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದಲ್ಲಿ ಘಟನೆ ನಡೆದಿದೆ.
ಬೆಂಕಿ ಹಿನ್ನೆಲೆ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಸದ್ಯ ಹುನೇಗಲ್ ಬಳಿ ಹೆದ್ದಾರಿ ಎರಡು ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಟ್ರಾಫಿಕ್ ಜಾಮ್ ಕ್ಲೀಯರ್ ಮಾಡಲು ಹರಸಾಹಸ ಪಡುತ್ತಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಘಟನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಮನೆಯಿಂದ ಹೊರ ಬರದೆ ಭಯಭೀತರಾಗಿದ್ದಾರೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಎರಡು ಲಾರಿಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..