ಕೋಲಾರ: ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರ ಅಗಲಿಕೆ ದೇಶದ ದುಡಿಯುವ ಜನತೆಗೆ ಹಾಗೂ ಎಡ ಚಳುವಳಿಗೆ ಬಹುದೊಡ್ಡ ನಷ್ಟ ಉಂಟು ಮಾಡಿದೆ ಎಂದು ಹಿರಿಯ ಮುಖಂಡ ಹ.ಮಾ ರಾಮಚಂದ್ರಪ್ಪ ತಿಳಿಸಿದರು.
ನಗರದ ಮೆಕ್ಕೆ ವೃತ್ತದಲ್ಲಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ವತಿಯಿಂದ ಸೀತಾರಾಮ್ ಯೆಚೂರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಎರಡು ನಿಮಿಷಗಳ ಕಾಲ ಮೌನ ಗೌರವ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೆ ಹೋರಾಟದ ಮೂಲಕ ಸಮಾಜದ ಶೋಷಣೆ ದಬ್ಬಾಳಿಕೆ ವಿರುದ್ದ ಸಂಸತ್ತಿನ ಒಳಗೂ ಹೊರಗೂ ಹೋರಾಟ ಮಾಡಿದ್ದಾರೆ ದೇಶದಲ್ಲಿ ಒಳಿತಿಗಾಗಿ ಮಾರ್ಗದರ್ಶನ ಮಾಡುವ ನಾಯಕರಾಗಿ ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ, ಸಮಾಜದ ಪರಿವರ್ತನೆಗಾಗಿ ಮುಡಿಪಾಗಿಟ್ಟಿದ್ದರು ಎಂದರು.
ಪಾರ್ಲಿಮೆಂಟ್ ನಲ್ಲಿ ರಾಜ್ಯಸಭಾ ಸದಸ್ಯರಾಗಿ ದೇಶದ ಸಮಗ್ರ ಅಭಿವೃದ್ಧಿ ಹಾಗು ಸಮಗ್ರತೆ, ಐಕ್ಯತೆಯ ಮೇಲೆ ನ್ಯಾಯಯುತವಾದ ವಿಷಯಗಳನ್ನು ಮಂಡಿಸಿದ್ದಾರೆ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅದನ್ನು ವಿರೋಧಿಸಿ ನೇರವಾಗಿ ಇಂದಿರಾ ಗಾಂಧಿಯವರನ್ನೇ ಎದುರಿಸಿದ ದಿಟ್ಟತನ ಅವರದು ಅವರ ಭಾಷಣವನ್ನು ಕೇಳಲು ಸಾಲುಗಟ್ಟಿ ನಿಂತಿದ್ದ ಉದಾಹರಣೆಗಳು ಇದ್ದವು ಎಂದರು
ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಅವರ ಪ್ರಬುದ್ಧತೆಯೂ ಕೇವಲ ದೇಶದೊಳಗೆ ಮಾತ್ರವಲ್ಲ ವಿಶ್ವದೊಳಗೂ ಮಾದರಿಯಾಗಿದೆ. ಮಾರ್ಕ್ಸ್‌ವಾದದ ಹಲವು ಆಯಾಮಗಳಲ್ಲಿ ಆಳವಾದ ಪರಿಣತಿ ಅವರನ್ನು ವಿಶ್ವದ ಮುಖ್ಯ ಮಾರ್ಕ್ಸ್‌ವಾದಿ ಚಿಂತಕರನ್ನಾಗಿಸಿತ್ತು ಭಾರತದ ಯುವಜನತೆಗೆ ಕಾಮ್ರೇಡ್ ಸೀತಾರಾಮ ಯೆಚೂರಿಯವರ ಬದ್ಧತೆಯ ಜೀವನ ಎಂದಿಗೂ ಮಾದರಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ, ಟಿ.ಎಂ ವೆಂಕಟೇಶ್, ಹೆಚ್.ಬಿ ಕೃಷ್ಣಪ್ಪ, ವಿ.ನಾರಾಯಣರೆಡ್ಡಿ, ಗೀತಾ, ವಿಜಯಕೃಷ್ಣ, ಆಲಹಳ್ಳಿ ವೆಂಕಟೇಶಪ್ಪ, ಡಿ ಮುನೇಶ್, ಭೀಮರಾಜ್, ಮಂಜುಳಾ, ಮುಸ್ತಫಾ, ಸತೀಶ್, ಅಪ್ಪಯ್ಯಣ್ಣ, ಯಲ್ಲಪ್ಪ ಮುಂತಾದವರು ಇದ್ದರು.
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…