ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಲೀಜನ್ ನ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭವನ್ನು ತಾಲೂಕಿನ ಶ್ರೀ ಘಾಟಿ ಸಮೀಪದ ಲಘುಮೇನಹಳ್ಳಿ ಗೇಟ್ ಸಮೀಪ ಆಯೋಜನೆ ಮಾಡಲಾಗಿತ್ತು.

ಘಟಕದ ನೂತನ‌ ಅಧ್ಯಕ್ಷರಾಗಿ ಜಯಕಾಂತಮ್ಮ, ಉಪಾಧ್ಯಕ್ಷರಾಗಿ ಸವಿತಾ ಆನಂದ್, ಕಾರ್ಯದರ್ಶಿಯಾಗಿ ಸೌಮ್ಯ, ಖಜಾಂಜಿ  ಶೋಭಾ ನಾರಾಯಣಸ್ವಾಮಿ ಸೇರಿದಂತೆ 20 ಮಂದಿ ಅಧಿಕಾರ ಸ್ವೀಕರಿಸಿದರು.

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಜಯಕಾಂತಮ್ಮ, ಸೀನಿಯರ್ ಸಿಟಿಜನ್ ಗೆ ಈ ಸಂಸ್ಥೆ ಬಹಳ ಅವಶ್ಯಕತೆ ಇದೆ. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಮಾನ ಮನಸ್ಕ, ಸಮಾಜ ಮುಖಿ ವ್ಯಕ್ತಿಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದ್ದು, ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ, ತ್ಯಾಜ್ಯದ ವಿರುದ್ಧ ಸಮರ, ಪ್ಲಾಸ್ಟಿಕ್ ನಿರ್ಮೂಲನೆ, ಸಸಿ ನೆಡುವಿಕೆ, ಕಲ್ಯಾಣಿ ಸ್ವಚ್ಛತೆ ಸೇರಿದಂತೆ ಇತರೆ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ನಂತರ ರಾಷ್ಟ್ರೀಯ ಅಧ್ಯಕ್ಷ ಚಿತ್ರಕುಮಾರ್ ಮಾತನಾಡಿ, ತೂಬಗೆರೆ ವ್ಯಾಪ್ತಿಯಯಲ್ಲಿ ಮಹಿಳೆಯರನ್ನು‌ ಒಳಗೊಂಡ ಘಟಕವನ್ನು ಸ್ಥಾಪಿಸಬೇಕು ಎಂಬ ನಿರ್ಧಾರದಿಂದ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಗೆ ಸ್ಥಾಪಿಸಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ಎಲ್ಲರೂ ಸೇವಾ ಮನೋಭಾವದಿಂದ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮಾರ್ಚ್ 8-9ರಂದು ಉಡುಪಿಯಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯುತ್ತದೆ. ಇದರಲ್ಲಿ ಎಲ್ಲರೂ ಭಾಗವಹಿಸಿ ಸಮ್ಮೇಳನದ ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲರಲ್ಲೂ ನಾಯಕತ್ವ ಇದೆ, ಅದನ್ನ ಹೊರತರಲು ಇಂತಹ ವೇದಿಕೆಗಳು ಅತ್ಯಗತ್ಯವಾಗಿರುತ್ತವೆ ಎಂದರು.

ನಂತರ ಉಪಾಧ್ಯಕ್ಷ ಡಾ.ಎಂ ಶಿವಕುಮಾರ್ ಮಾತನಾಡಿ, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಭಾರತದಲ್ಲಿ ಸ್ಥಾಪನೆಗೊಂಡು “ಜವಾಬ್ದಾರಿಯುತ ಮತ್ತು ಸಕ್ರಿಯ ಪೌರತ್ವದ” ಧೈಯ ವಾಕ್ಯ ದೊಂದಿಗೆ ವಿಶ್ವದೆಲ್ಲಡೆ ಪಸರಿಸುತ್ತಿರುವ ಪ್ರಪ್ರಥಮ ಸ್ವಯಂ ಸೇವಾ ಸಂಸ್ಥೆ‌ ಇದಾಗಿದೆ. ಈ ವಿಶಿಷ್ಟ ಜೂನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ 40 ವಯಸ್ಸು ದಾಟಿದ ಹಿರಿಯ ಜೇಸಿಗಳು ಮತ್ತು ಸಮಾನ ಮನಸ್ಕ ಸಮಾಜ ಮುಖಿ ವ್ಯಕ್ತಿ ಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದೆ, ಇದು ವಿಶ್ವದ ಅತಿದೊಡ್ಡ ಸಮುದಾಯ ಸೇವಾ ಸಂಸ್ಥೆಯಾಗಿದೆ ಎಂದರು.

ಈ 27 ವರ್ಷಗಳಲ್ಲಿ ಸೀನಿಯರ್ ಛೇಂಬರ್ ನಮ್ಮ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಅಶಕ್ತರು, ಸಮಾಜದ ದುರ್ಬಲ ವರ್ಗದವರಿಗೆ ಸಹಾಯಸ್ತ, ಅಂಗವಿಕಲರಿಗೆ ನೆರವು, ಮಹಿಳಾ ಸಬಲೀಕರಣಕ್ಕಾಗಿ ಹೊಲಿಗೆ ಯಂತ್ರಗಳು, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಬೋಧನಾ ಸಾಧನಗಳು, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ತಲಾ ವಿದ್ಯಾರ್ಥಿ ವೇತನಗಳ ವಿತರಣೆ ಮಾಡಿ ಸಮುದಾಯದಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತನ್ನದೆ ಛಾಪನ್ನು ಮೂಡಿಸುತ್ತಿದೆ ಎಂದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ಟಿ.ರಂಗಪ್ಪ, ವಿಜಯಪುರ ಲೀಜನ್ ನ ಅಧ್ಯಕ್ಷ ಕೆ.ವೆಂಕಟೇಶ್, ರಾಷ್ಟ್ರೀಯ ಸಂಯೋಜಕರಾದ ಅಕ್ಷತಾ, ಎಂ.ಆರ್, ಜಯೇಶ್, ಉಪಾಧ್ಯಕ್ಷೆ ಸವೀತಾ ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago