ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಪಯಣ ಮಾಡಿದರು.
3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ದ್ರೌಪದಿ ಮುರ್ಮು ಅವರು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿಯಾಗಿದ್ದಾರೆ. 2009ರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.
“ಭಾರತೀಯ ವಾಯುಪಡೆಯ ಬಲಿಷ್ಠ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವುದು ನನಗೆ ಉಲ್ಲಾಸದಾಯಕ ಅನುಭವವಾಗಿತ್ತು. ಭಾರತದ ರಕ್ಷಣಾ ಸಾಮರ್ಥ್ಯವು ನೆಲ, ವಾಯು ಮತ್ತು ಸಮುದ್ರದ ಎಲ್ಲಾ ಗಡಿಗಳನ್ನು ಆವರಿಸಲು ಅಗಾಧವಾಗಿ ವಿಸ್ತರಿಸಿದೆ ಎಂಬುದು ಹೆಮ್ಮೆಯ ವಿಷಯ ಎಂದು ಬರೆದಿದ್ದಾರೆ.
ರಾಷ್ಟ್ರಪತಿಯವರು ಬ್ರಹ್ಮಪುತ್ರ ಮತ್ತು ತೇಜ್‌ಪುರ ಕಣಿವೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸಿದರು. 106 ಸ್ಕ್ವಾಡ್ರನ್‌ನ ಕಮಾಂಡಿಂಗ್ ಆಫೀಸರ್ ಜಿಪಿ ಕ್ಯಾಪ್ಟನ್ ನವೀನ್ ಕುಮಾರ್ ಅವರು ವಿಮಾನವನ್ನು ಹಾರಿಸಿದರು. ವಿಮಾನವು ಸಮುದ್ರ ಮಟ್ಟದಿಂದ ಸುಮಾರು ಎರಡು ಕಿಮೀ ಎತ್ತರದಲ್ಲಿ ಮತ್ತು ಗಂಟೆಗೆ ಸುಮಾರು 800 ಕಿಮೀ ವೇಗದಲ್ಲಿ ಹಾರಿತು.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…