ಸುಗಮ್ಯ ಭಾರತ ಅಭಿಯಾನದಡಿ ವಿಕಲಚೇತನರು ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಹೊರಾಂಗಣ ಮತ್ತು ಒಳಾಂಗಣ ಪ್ರದೇಶದಲ್ಲಿ ಯಾವುದೇ ರೀತಿಯ ಅಡೆ ತಡೆಗಳಿಲ್ಲದೆ ಸುಗಮವಾಗಿ ಸಂಚರಿಸಲು ಸುಗಮ್ಯ ಭಾರತ ಅಭಿಯಾನದ ಉದ್ದೇಶವಾಗಿದ್ದು ಈ ಅಭಿಯಾನಕ್ಕೆ ಇಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಾದ ಎ.ಬಿ ಬಸವರಾಜು ಅವರು ಚಾಲನೆ ನೀಡಿದರು.
ಈಗಾಗಲೇ ರಾಜ್ಯಾದ್ಯಂತ ಈ ಸುಗಮ್ಯ ಯಾತ್ರಾ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಇಳಿಜಾರು ಮೆಟ್ಟಿಲುಗಳು ಮತ್ತು ಸೂಚನಾ ಫಲಕಗಳನ್ನು ಅಚ್ಚುಕಟ್ಟಾಗಿ ಒಳಗೊಂಡಿರಬೇಕು. ವಿಕಲಚೇತನ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ಕ್ರೋಢೀಕರಿಸಲು ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ The Association of People with Disability(ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ಸಂಘ) ಬೆಂಗಳೂರು ಸಂಸ್ಥೆಯೊಂದಿಗೆ ಈ ಒಪ್ಪಂದ ಮಾಡಿಕೊಂಡಿದೆ. ಅದರಂತೆ ಇದರ ಬಗ್ಗೆ ನಿಖರವಾದ ಮಾಹಿತಿಯನ್ನು ಸಂಗ್ರಹಿಸಲು Yes to Access ಎಂಬ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದು, ಎಲ್ಲರೂ ಈ ಅಪ್ಲಿಕೇಶನ್ ಅನ್ನು ತಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಬಳಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಅಪ್ಲಿಕೇಶನ್ ಅನ್ನು APD ಸಂಸ್ಥೆಯ ಗಿರಿಜಮ್ಮ ಸ್ಥಳದಲ್ಲಿಯೇ ಪ್ರಾಯೋಗಿಕವಾಗಿ ಯಾವ ರೀತಿ ಬಳಸಬಹುದು ಎಂಬ ಮಾಹಿತ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ, ಜಿಲ್ಲಾ ಅಂಗವಿಕಲ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಸುನೀಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…