ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೇ 13ರಂದು ಅಧಿಕಾರದಿಂದ ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು 53ನೇ ಸಿಜೆಐ ಆಗಿ 6 ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಮತ್ತು ನವೆಂಬರ್ 23, 2025ರಂದು ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ಗವಾಯಿ ಅವರು ಮೇ 29, 2019ರಂದು ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅವರು ನವೆಂಬರ್ 2003ರಲ್ಲಿ ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು ಮತ್ತು ನವೆಂಬರ್ 2005ರಲ್ಲಿ ಖಾಯಂ ನ್ಯಾಯಾಧೀಶರಾದರು.
ನ್ಯಾಯಾಧೀಶರಾಗುವ ಮುನ್ನ ಅವರು ಸಾಂವಿಧಾನಿಕ ಕಾನೂನು ಮತ್ತು ಆಡಳಿತ ಕಾನೂನುಗಳಲ್ಲಿ ವಕೀಲಿಕೆ ಮಾಡಿದರು. ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರಾಗಿ ಕಾರ್ಯನಿರ್ವಹಿಸಿದರು. ಆಗಸ್ಟ್ 1992ರಲ್ಲಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠದಲ್ಲಿ ಸಹಾಯಕ ಸರ್ಕಾರಿ ವಕೀಲರಾಗಿ ಮತ್ತು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡರು. ಜುಲೈ 1993 ರವರೆಗೆ ಈ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಜನವರಿ 17, 2000ರಂದು ನಾಗ್ಪುರ ಪೀಠದ ಸರ್ಕಾರಿ ವಕೀಲರಾಗಿ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಅವರು ನೇಮಕಗೊಂಡರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…