ಸುಪ್ರೀಂ ಕೋರ್ಟ್ ನ CJI ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆತ ವಿಚಾರ: ಸಿಎಂ ಸಿದ್ದರಾಮಯ್ಯ ಖಂಡನೆ: ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕ್ಕಾಗಿ ಆಗ್ರಹ

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ  ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

36 minutes ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

2 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

21 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

23 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

24 hours ago