ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ.
ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53), ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್ (10), ಸಹೋದರ ಯೋಗೇಶ್ (55), ಅವರ ಪತ್ನಿ ನೀತು (45), ಪುತ್ರಿ ನೇಹಾ (24), ಪುತ್ರ ಅಂಜನ್ (14) ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಿರುವಿನಲ್ಲಿ ರಸ್ತೆ ಕಿರಿದಾಗಿದ್ದು ರಸ್ತೆಗೆ ತಾಗಿದಂತೆ ಇರುವ ವಿದ್ಯುತ್ ಕಂಬದಿಂದಾಗಿ ಅಲ್ಲಿ ಹಲವು ಅಪಘಾತಗಳು ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಮೃತ ರವಿ ಸೋಮವಾರಪೇಟೆಯಲ್ಲಿ ಪತ್ರಕರ್ತರಾಗಿದ್ದ ದಿವಂಗತ ಬಿ.ಎನ್.ಗೋವಿಂದಪ್ಪನವರ ಅಣ್ಣನ ಮಗ. ಇವರು ಸಹ ಪತ್ರಿಕಾ ವಿತರಕರಾಗಿದ್ದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…