ಸುಮಾರು ಆರು ತಿಂಗಳಿಂದೆ ಕಳುವಾಗಿದ್ದ ವೃದ್ಧೆಯ ಕರಿಮಣಿ ಸರ: ಕಳ್ಳರನ್ನ ಬೇಟೆಯಾಡಿ ಸರ ವಶಪಡಿಸಿಕೊಂಡ ಗ್ರಾಮಾಂತರ ಠಾಣಾ ಪೊಲೀಸರು: ಇಂದು ವೃದ್ಧೆಗೆ ಕರಿಮಣಿ ಸರವನ್ನು ಒಪ್ಪಿಸಿದ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ: ವೃದ್ಧೆ ಮುಖದಲ್ಲಿ‌‌ ಮಂದಹಾಸ

ಸುಮಾರು ಆರು ತಿಂಗಳ ಹಿಂದೆ(20.12.2023) ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಂದು ಕಳುವಾಗಿದ್ದ ಕರಿಮಣಿ ಸರವನ್ನು ವೃದ್ಧೆಗೆ ಮರಳಿಸಿರುವ ಘಟನೆ ನಡೆದಿದೆ.

ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದ ವೆಂಕಟಲಕ್ಷ್ಮಮ್ಮ ಎಂಬ ವೃದ್ಧೆಯ ಕೊರಳಲ್ಲಿದ್ದ 10 ಗ್ರಾಂ ತೂಕದ ಕರಿಮಣಿ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಕಳ್ಳರು ಕದ್ದು ಎಸ್ಕೇಪ್ ಆಗಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವೃದ್ಧೆ ದೂರು ದಾಖಲು ಮಾಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ, ಸೂಕ್ತ ತನಿಖೆ ನಡೆಸಿ ಕಳ್ಳರ ಜಾಡು ಪತ್ತೆಹಚ್ಚಿ ಕದ್ದ ಕರಿಮಣಿ ಸರವನ್ನು ವಶಪಡಿಸಿಕೊಂಡು, ವೃದ್ಧೆಗೆ ಒಪ್ಪಿಸಿದ್ದಾರೆ.

ಆರು ತಿಂಗಳು ಬಳಿಕ ತನ್ನ ಕರಿಮಣಿ‌ಸರ ಪಡೆದ ನಂತರ ವೃದ್ಧೆಯ ಮುಖದಲ್ಲಿ ಮಂದಹಾಸ ಮೂಡಿತ್ತು. ಪೊಲೀಸರ ಕಾರ್ಯವೈಖರಿಗೆ ವೃದ್ಧೆ ತನ್ನ ಕೃತಜ್ಞತೆಗಳನ್ನು ತಿಳಿಸಿದರು.

ಘಟನೆ ವಿವರ:

20-12-2023ರಂದು ಬೆಳಗ್ಗೆ ಎಂದಿನಂತೆ ಹಸುವನ್ನು ಮೇಯಿಸಲು ವೃದ್ಧೆ ತಮ್ಮ ಜಮೀನಿನ ಬಳಿ ಬಂದಿರುತ್ತಾರೆ. ಒಂಟಿಯಾಗಿ ಹಸುವನ್ನು ಮೇಯಿಸುತ್ತಿದ್ದ ವೃದ್ಧೆಯನ್ನು ಗಮನಿಸಿದ ಇಬ್ಬರು ಕಳ್ಳರು, ಅದರಲ್ಲಿ ಒಬ್ಬ ಮಧ್ಯಾಹ್ನ 3ಗಂಟೆ ಸುಮಾರಿಗೆ ಅಜ್ಜಿ ಕುಳಿತ್ತಿದ್ದ ಸ್ಥಳಕ್ಕೆ ಬರುತ್ತಾನೆ. ಅಜ್ಜಿ ಬಳಿ ಬಂದಾತ ಇಲ್ಲಿ ಕಳ್ಳರು ಹೆಚ್ಚಾಗಿ ಓಡಾಡುತ್ತಾರೆ. ಕೊರಳಲ್ಲಿ ಚಿನ್ನದ ಗುಂಡುಗಳಿರುವ ಕರಿಮಣಿ ಸರವನ್ನು ಹಾಕಿಕೊಂಡಿದ್ದೀರಾ‌, ಅದನ್ನು ಬಿಚ್ಚಿಕೊಡಿ ಬಟ್ಟೆಯಲ್ಲಿ ಸುತ್ತಿಕೊಡುತ್ತೇವೆ ಎಂದು ಹೇಳಿ ಕತ್ತಲ್ಲಿದ್ದ ಚಿನ್ನದ ಗುಂಡುಗಳೊಂದಿಗೆ ಪೋಣಿಸಿರುವ ಮಣಿ ಇರುವ ಸರವನ್ನು ಬಿಚ್ಚಿಸಿಕೊಂಡು ಅಜ್ಜಿಗೆ ಅರಿವಿಲ್ಲದಂತೆ ಕಳುವು ಮಾಡಿ ಪರಾರಿಯಾಗಿದ್ದನು.

ಸುಮಾರು 50ಸಾವಿರ ಬೆಲೆಬಾಳುವ ಮಣಿಗಳೊಂದಿಗೆ ಪೋಣಿಸಿರುವ 34 ಚಿನ್ನದ ಗುಂಡುಗಳು ಸುಮಾರು 10 ಗ್ರಾಂ ತೂಕದ ಕರಿಮಣಿ ಸರವನ್ನು ಕದ್ದೊಯ್ದಿದ್ದರು. ಈ ಕುರಿತು 21-13-2023ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

3 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

4 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

5 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

7 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

10 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

22 hours ago