ಸುಮಾರು 35-40 ಸಾವಿರ ಬೆಲೆ ಬಾಳುವ ಟಗರು ಹಾಗೂ ಹೋತವನ್ನ ರಾತ್ರೋರಾತ್ರಿ ಕದ್ದೊಯ್ದ ಕಳ್ಳರು. ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗದೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೈತ ಶ್ರೀನಿವಾಸ್ ಎಂದಿನಂತೆ ತನ್ನ ಮನೆಯ ಮುಂದೆ ಇರುವ ಕೊಟ್ಟಿಗೆಯಲ್ಲಿ ಕುರಿ, ಮೇಕೆ ಕಟ್ಟಿಹಾಕಿದ್ದರು. ಕೊಟ್ಟಿಗೆಯಲ್ಲಿದ್ದ ಚಿನ್ನದ ಬೆಲೆಯ ಟಗರು, ಹೋತವನ್ನ ರಾತ್ರೋರಾತ್ರಿ ಕಳ್ಳರು ಎಸ್ಕೇಪ್ ಮಾಡಿದ್ದಾರೆ.
35-40ಸಾವಿರ ಬೆಲೆ ಬಾಳುವ ಟಗರು ಮತ್ತು ಮೇಕೆ ಹೋತವನ್ನ ಕಳೆದುಕೊಂಡ ರೈತ ಶ್ರೀನಿವಾಸ್ ಕಣ್ಣೀರಿಟ್ಟು ಸಂಕಷ್ಟದ ಪಾಲಾಗಿದ್ದಾರೆ.
ಇತ್ತೀಚೆಗೆ ನಾಗದೇನಹಳ್ಳಿ ಗ್ರಾಮದ ಸುತ್ತಾಮುತ್ತ ಕಳ್ಳರ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳ್ಳರ ಹಾವಳಿಯನ್ನು ಮಟ್ಟಹಾಕುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…