ದೊಡ್ಡಬಳ್ಳಾಪುರ: ಸೂಕ್ತ ದಾಖಲೆಗಳಿಲ್ಲದೇ ಹಾಗೂ ನಿಯಮಾವಳಿ ಎಟಿಎಂಗಳಿಗೆ ತುಂಬಿಸುವ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ₹4 ಕೋಟಿ ರೂ.ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಗರದ ಡಿ-ಕ್ರಾಸ್ ಬಳಿ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ನಗದು ಇದ್ದು, ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಇಡಿ ಹಾಗೂ ಐಟಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮೇಲ್ನೋಟಕ್ಕೆ ರೋಜಿಪುರದ ಎಟಿಎಂಗೆ ಸಾಗಿಸುತ್ತಿದ್ದ ಹಣ ಎಂದು ತಿಳಿದುಬಂದಿದೆ. ಆದರೆ, ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆ ಇರಲಿಲ್ಲ. ಹಾಗಾಗಿ ಹಣವನ್ನು ಠಾಣೆಗೆ ಸಾಗಿಸಿದ್ದು, ಲೆಕ್ಕ ಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಚುನಾವಣಾಧಿಕಾರಿಗಳು ದೂರು ಸಹ ನೀಡಿದ್ದು, ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ವಶಕ್ಕೆ ಪಡೆದಿರುವ ಹಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…