ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ನೀರಿನ ಮಿತಿ ಬಳಕೆಯಿಂದ ಅಧಿಕ ಇಳುವರಿ ಪಡೆಯಲು ಹಾಗೂ ಜಿಲ್ಲೆಯಲ್ಲಿ ಲಘು ನೀರಾವರಿ ಪದ್ಧತಿಯನ್ನು ಜನಪ್ರಿಯಗೊಳಿಸಲು ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತೆ ಸೂಕ್ಷ್ಮ ನೀರಾವರಿ (ಹನಿ ನೀರಾವರಿ ಮತ್ತು ತುಂತುರು ನೀರಾವರಿ) ಘಟಕಗಳನ್ನು ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಕೃಷಿ ಇಲಾಖೆಯಿಂದ ಶೇ.90ರ ರಿಯಾಯಿತಿಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

*ಸೌಲಭ್ಯ ಪಡೆಯಲು ಷರತ್ತುಗಳು*
ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ಎಲ್ಲಾ ವರ್ಗದ ರೈತರಿಗೆ 5.0 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತದೆ. ಮೊದಲ ಎರಡು ಹೆಕ್ಟೇರ್ ಪ್ರದೇಶದವರೆಗೆ ಶೇ.90 ರಷ್ಟು ಸಹಾಯಧನ ಮತ್ತು ಎರಡು ಹೆಕ್ಟೇರ್ ಗಿಂತ ಮೇಲ್ಪಟ್ಟು 5.0 ಹೆಕ್ಟೇರ್ ವರೆಗೆ ಶೇ.45 ರಷ್ಟು ಸಹಾಯಧನವನ್ನು ಸಾಮಾನ್ಯ ವರ್ಗದ ರೈತರಿಗೆ ಮತ್ತು ಶೇ.55 ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ನೀಡಲು ಅವಕಾಶವಿದೆ.

ಸರ್ಕಾರದಿಂದ ಅನುಮೋದನೆಗೊಂಡಿರುವ ಸಂಸ್ಥೆಗಳಿಂದ ಘಟಕಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಸಹಾಯಧನ ದೊರೆಯುತ್ತದೆ.

ಸೂಕ್ಷ್ಮ ನೀರಾವರಿ ಘಟಕವನ್ನು ಸಹಾಯಧನದಡಿ ಪಡೆಯಲು ಸಾಮಾನ್ಯ ವರ್ಗದ ರೈತರಿಗೆ ಒಮ್ಮೆ ಮಾತ್ರ ಹಾಗೂ ಪರಿಶಿಷ್ಟ ಜಾತಿ ರೈತರಿಗೆ ಏಳು ವರ್ಷಗಳಿಗೊಮ್ಮೆ ಮಾತ್ರ ಅವಕಾಶವಿರುತ್ತದೆ. ಏಳು ವರ್ಷಗಳ ಹಿಂದೆ, ಸೂಕ್ಷ್ಮನೀರಾವರಿ ಸವಲತ್ತು ಪಡೆದ ಪರಿಶಿಷ್ಟ ಜಾತಿ ರೈತರಿಗೆ ಮತ್ತೊಮ್ಮೆ ಸವಲತ್ತು ಪಡೆಯಲು ರೈತರಿಗೆ ಆದ್ಯತೆ ಮೇಲೆ ನೀಡಲಾಗುವುದು.

‌‌‌ರೈತರು ಸಹಾಯಧನದಡಿ ಸವಲತ್ತನ್ನು ಪಡೆಯಲು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ದಾಖಲೆಗಳೊಂದಿಗೆ-ಪಹಣಿ/ಹಿಡುವಳಿ ಪತ್ರ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ರೈತರಿಗೆ ಜಾತಿ ಪ್ರಮಾಣ ಪತ್ರ. ಮೊಬೈಲ್ ಸಂಖ್ಯೆ, ಚೆಕ್ಕುಬಂದಿ, ನೀರಿನ ಲಭ್ಯತೆ ಪ್ರಮಾಣ ಪತ್ರ ಆಧಾರ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ, ತೋಟಗಾರಿಕೆ/ರೇಷ್ಮೆ ಇಲಾಖೆಯಿಂದ ಸಹಾಯಧನ ಪಡೆದಿರುವುದಿಲ್ಲ ಎಂಬ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ.ಕೋಡ್ ಸಂಖ್ಯೆ, 100/- ರೂ ಛಾಪಾ ಕಾಗದದ ಮೇಲೆ ಮುಚ್ಚಳಿಕೆ ಪತ್ರ ರೈತ ಸಂಪರ್ಕ ಕೇಂದ್ರದ ಮುಖ್ಯಸ್ಥರಿಗೆ ಸಲ್ಲಿಸುವುದು.

ಸೂಕ್ಷ್ಮ ನೀರಾವರಿ ಘಟಕಗಳನ್ನು ಕೃಷಿಗೆ ಮಾತ್ರ ಉಪಯೋಗಿಸಲಾಗುವುದು ಎಂದು ರೈತರು ಘೋಷಣಾ ಪತ್ರ ನೀಡಬೇಕು. ರೈತರು ಕಡ್ಡಾಯವಾಗಿ FID ಹೊಂದಿರತಕ್ಕದ್ದು.

ಇಲಾಖೆಯಿಂದ ಸೂಕ್ಷ್ಮ ನೀರಾವರಿ ಘಟಕಗಳನ್ನು ಪಡೆಯಲು ಹೆಚ್ಚಿನ ವಿವರಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

6 minutes ago

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

13 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

14 hours ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

15 hours ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

15 hours ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

17 hours ago