ಮೊದಲೇ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಆ ಬಡ ಕುಟುಂಬಕ್ಕೆ ಸಮಸ್ಯೆ ಮೇಲೆ ಸಮಸ್ಯೆ, ಇದೆಲ್ಲದರ ಜೊತೆಗೆ ಮತ್ತೊಂದು ದೊಡ್ಡ ಸಮಸ್ಯೆ ಸಿಡಿಲು ಬಡಿದಂತೆ ಎದುರಾಗಿ ಸಂಪೂರ್ಣವಾಗಿ ಬೀದಿಗೆ ಬರುವಂತಾಗಿದೆ.
ಸರಕಾರ ಬಡತನ ನಿರ್ಮೂಲನೆ ಮಾಡಬೇಕು, ಯಾರೂ ಸೂರು ಇಲ್ಲದೆ ಬೀದಿಯಲ್ಲಿ ವಾಸ ಮಾಡಬಾರದು ಎಂದು ಸರ್ಕಾರ ಚಿಂತನೆ ನಡೆಸುತ್ತಿದೆ. ಯಾರೂ ಕೂಡ ಹಸಿವಿನಿಂದ ಮಲಗಬಾರದು ಎಂಬ ಸದುದ್ದೇಶದಿಂದ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಆದರೆ, ಇಲ್ಲೊಂದು ಕಡು ಬಡ ಕುಟುಂಬ ಮಕ್ಕಳಿಗೆ ಒಂದು ಹೊತ್ತು ಊಟ ಹಾಕಲು ಪರದಾಡುತ್ತಿರುವ ಸಮಯದಲ್ಲಿ, ವಾಸ ಮಾಡಲು ಇದ್ದ ಮನೆಯನ್ನು ಕಳೆದುಕೊಂಡು ಬೀದಿಗೆ ಬಂದಿದೆ. ಕಷ್ಟನೋ ಸುಖನೋ ಕೂಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದ ಮಹಿಳೆಯನ್ನು ಆ ಒಂದು ದಿನ ಏಕಾಏಕಿ ಬೀದಿಗೆ ನಿಲ್ಲುವಂತೆ ಮಾಡಿದೆ. ಅಷ್ಟಕ್ಕೂ ಅಲ್ಲಿ ಆಗಿದ್ದಾದರೂ ಏನು ಅಂತಿರಾ ಈ ಸ್ಟೋರಿ ಒಮ್ಮೆ ಓದಿ….
ಎಂದಿನಂತೆ ಬೆಳಗ್ಗೆ ಎದ್ದು ಕೂಲಿಗೆ ಹೋಗಿದ್ದಾಳೆ. ಮಕ್ಕಳು ಮಧ್ಯಾಹ್ನದ ಬಿಸಿ ಊಟ ತಿನ್ನಲು ಶಾಲೆ ಬಳಿ ತೆರಳಿದ್ದರು. ಸಂಜೆ ಕೂಲಿ ಮುಗಿಸಿ ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಇದ್ದ ರಾಗಿ, ಅಕ್ಕಿ, ಅಡುಗೆ ಸಾಮಗ್ರಿಗಳ ಜೊತೆಯಲ್ಲಿ ಬೀರು, ಚೇರ್ ಎಲ್ಲವೂ ಕೂಡ ಸಂಪೂರ್ಣವಾಗಿ ಬೆಂಕಿಗಾಹುತಿ ಆಗಿವೆ.
ಒಟ್ಟಾರೆ, ಕೂಲಿ ನಾಲಿ ಮಾಡಿ ಮಕ್ಕಳಿಗೆ ಮೂರು ಹೊತ್ತು ಹೊಟ್ಟೆ ತುಂಬಾ ಊಟ ಹಾಕುತ್ತಿದ್ದ ಮಹಿಳೆ ಈಗ ಒಂದು ಹೊತ್ತಿನ ಊಟಕ್ಕಾಗಿ ಅಲೆಯುತ್ತಿದ್ದಾಳೆ. ಸೂರು ಇಲ್ಲದೆ ಬೀದಿಗೆ ಬಂದಿದ್ದಾರೆ. ಇನ್ನಾದರೂ ಯಾರಾದರೂ ಆ ಮಹಿಳೆಯ ಕಷ್ಟಕ್ಕೆ ಸ್ಪಂದಿಸುತ್ತಾರಾ ಕಾದು ನೋಡಬೇಕಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…