ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಸುಮಾರು 2 ವರ್ಷದ ಹೆಣ್ಣು ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ನಿನ್ನೆ ರಾತ್ರಿ ಸುಮಾರು 11:30ರ ಸಮಯದಲ್ಲಿ ಚಿರತೆ ಬೋನಿಗೆ ಬಿದ್ದಿದೆ ಎನ್ನಲಾಗಿದೆ. ಗ್ರಾಮಸ್ಥರ ಮನವಿ ಮೇರೆಗೆ ಬುಧವಾರ ಸಂಜೆ ತಾಲೂಕಿನ ಸೂಲುಕುಂಟೆ ಗ್ರಾಮದ ಹೊರವಲಯದಲ್ಲಿರುವ ಒಂಟಿ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇರಿಸಲಾಗಿತ್ತು.
ಗ್ರಾಮದಲ್ಲಿನ ಸಾಕು ಪ್ರಾಣಿಗಳ ಮೇಲೆ ಹಲವು ಬಾರಿ ದಾಳಿ ನಡೆಸಿ ಬಲಿಪಡೆಯುತ್ತಿದ್ದ ಚಿರತೆ ಈಗ ಬೋನಿಗೆ ಬಿದ್ದಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ಬೋನಿಗೆ ಬಿದ್ದಿರುವ ಚಿರತೆ ನೋಡಲು ಅಕ್ಕಪಕ್ಕದ ಗ್ರಾಮಸ್ಥರು ದೌಡಾಯಿಸಿ ತಮ್ಮ ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇದ್ದು ಪರಿಶೀಲನೆ ನಡೆಸುತ್ತಿದ್ದಾರೆ.