ಸೆಪ್ಟೆಂಬರ್ 13 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿಗಳು ಶೀಘ್ರವಾಗಿ ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಿ

ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ಸೆಪ್ಟೆಂಬರ್ 13ರಂದು ದೇವನಹಳ್ಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗುತ್ತಿದ್ದು ಆಸಕ್ತ ಉದ್ಯೋಕಾಂಕ್ಷಿಗಳು ಹಾಗೂ ಉದ್ಯೋಗದಾತರು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉದ್ಯೋಗಾಂಕ್ಷಿಗಳು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಾಯಿಸಿಕೊಳ್ಳಬಹುದು.

ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರ ಮಹಾತ್ವಾಕಾಂಕ್ಷಿ ಆಶಯದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಕೈಗಾರಿಕಾ ಪ್ರದೇಶವಿದ್ದು ಉದ್ಯೋಗಾವಕಾಶಗಳು ಕೂಡ ಹೆಚ್ಚು ಸೃಷ್ಟಿ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಉದ್ಯೋಗ ಮೇಳದಲ್ಲಿ 100 ಕ್ಕಿಂತ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಖಾಸಗಿ ಕಂಪನಿಗಳು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ವಿವಿಧ ಜಿಲ್ಲೆಗಳ ಉದ್ಯೋಗಾಂಕ್ಷಿಗಳು ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ ಎಂದರು.

ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಪೋರ್ಟಲ್ https://bangalorerural.nic.in/en/job-fair/ ನಲ್ಲಿ ಸ್ವ-ವಿವರದೊಂದಿಗೆ ನೊಂದಾಯಿಸಬಹುದಾಗಿದೆ.

ಎಸ್.ಎಸ್.ಎಲ್.ಸಿ , ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು, ಆಸಕ್ತ ಉದ್ಯೋಕಾಂಕ್ಷಿಗಳು ಸ್ವವಿವರವುಳ್ಳ ಬಯೋಡಾಟಾ ದೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿದ್ದು, ಸಂದರ್ಶನಕ್ಕೆ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

ಉದ್ಯೋಗ ಮೇಳದ ಆಯೋಜನೆಗೆ ಸಂಬಂಧಿಸಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದ್ದು ಉದ್ಯೋಗ ಮೇಳದ ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಇದುವರೆಗೆ 523 ಉದ್ಯೋಗಾಂಕ್ಷಿಗಳು ನೋಂದಾಯಿಸಿಕೊಂಡಿದ್ದು, ಉದ್ಯೋಗ ಮೇಳದಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ.

ಆನ್ಲೈನ್ ನಲ್ಲಿ ನೋಂದಾಯಿಸದ ಅಭ್ಯರ್ಥಿಗಳು ಉದ್ಯೋಗ ಮೇಳದ ದಿನದಂದು, ಸ್ಥಳದಲ್ಲಿ ಸ್ಥಾಪಿಸಲಾಗಿರುವ ನೋಂದಣಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಉದ್ಯೋಗಾಂಕ್ಷಿಗಳು ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿಗಳಲ್ಲಿಯೂ ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ವಾರ್ತಾ ಇಲಾಖೆ ಸಹಾಯಕಿ ನಿರ್ದೇಶಕಿ ಹೇಮಾವತಿ ಜೆ ಸೇರಿದಂತೆ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

25 minutes ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

3 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

15 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

18 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

21 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

23 hours ago