ಬೆಂಗಳೂರು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರ ಗುರುವಾರದಂದು ಬೆಳಿಗ್ಗೆ 11 ಗಂಟೆಯಿಂದ 03 ಗಂಟೆಯವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು” ಇಲ್ಲಿ ಆಯೋಜಿಸಲಾಗಿರುತ್ತದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಪ್ರತಿಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಉದ್ಯೋಗ ನೋಂದಣಿಯನ್ನು ಮಾಡಿಸಿಕೊಳ್ಳಲು ತಿಳಿಸಲಾಗಿದೆ.
ಉದ್ಯೋಗ ನೋಂದಣಿ ಮಾಡಿಸಲು ಬೇಕಿರುವ ದಾಖಲಾತಿಗಳು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಪಿ.ಯು.ಸಿ ಮೂಲ ಅಂಕಪಟ್ಟಿ ಹಾಗೂ ನಕಲುಪ್ರತಿ (ಅನ್ವಯಿಸುವವರಿಗೆ), ಪದವಿಯ ಎಲ್ಲಾ ಸೆಮಿಸ್ಟರ್‌ಗಳ ಮೂಲ ಅಂಕಪಟ್ಟಿಗಳು ಹಾಗೂ ನಕಲು ಪ್ರತಿಗಳು (ಅನ್ವಯಿಸುವವರಿಗೆ), ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದಕ್ಕೆ ಸಂಬಂಧಿಸಿದ ಅಂಕಪಟ್ಟಿ ಪ್ರಮಾಣಪತ್ರಗಳು (ಅನ್ವಯಿಸುವವರಿಗೆ), ಜಾತಿ ಪ್ರಮಾಣ ಪತ್ರ (ಅನ್ವಯಿಸುವವರಿಗೆ) ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ ಕಾರ್ಡ್ ಪ್ರತಿ.
ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…