ಸೆಪ್ಟೆಂಬರ್ 14 ರಂದು ಉದ್ಯೋಗ ನೋಂದಣಿ ಶಿಬಿರ

ಬೆಂಗಳೂರು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರ ಗುರುವಾರದಂದು ಬೆಳಿಗ್ಗೆ 11 ಗಂಟೆಯಿಂದ 03 ಗಂಟೆಯವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು” ಇಲ್ಲಿ ಆಯೋಜಿಸಲಾಗಿರುತ್ತದೆ.

ಎಸ್‌.ಎಸ್‌.ಎಲ್‌.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಪ್ರತಿಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಉದ್ಯೋಗ ನೋಂದಣಿಯನ್ನು ಮಾಡಿಸಿಕೊಳ್ಳಲು ತಿಳಿಸಲಾಗಿದೆ.

ಉದ್ಯೋಗ ನೋಂದಣಿ ಮಾಡಿಸಲು ಬೇಕಿರುವ ದಾಖಲಾತಿಗಳು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಪಿ.ಯು.ಸಿ ಮೂಲ ಅಂಕಪಟ್ಟಿ ಹಾಗೂ ನಕಲುಪ್ರತಿ (ಅನ್ವಯಿಸುವವರಿಗೆ), ಪದವಿಯ ಎಲ್ಲಾ ಸೆಮಿಸ್ಟರ್‌ಗಳ ಮೂಲ ಅಂಕಪಟ್ಟಿಗಳು ಹಾಗೂ ನಕಲು ಪ್ರತಿಗಳು (ಅನ್ವಯಿಸುವವರಿಗೆ), ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದಕ್ಕೆ ಸಂಬಂಧಿಸಿದ ಅಂಕಪಟ್ಟಿ ಪ್ರಮಾಣಪತ್ರಗಳು (ಅನ್ವಯಿಸುವವರಿಗೆ), ಜಾತಿ ಪ್ರಮಾಣ ಪತ್ರ (ಅನ್ವಯಿಸುವವರಿಗೆ) ಎರಡು ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳು, ಆಧಾರ ಕಾರ್ಡ್‌ ಪ್ರತಿ.

ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

11 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

16 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

19 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago