ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ದೊಡ್ಡಬಳ್ಳಾಪುರದ ಮಾರುತಿನಗರದಲ್ಲಿ ಏ.8ರ ಸಂಜೆ 7:30ರ ಸುಮಾರಿನಲ್ಲಿ ಘಟನೆ ನಡೆದಿದೆ…

ಪಟ್ಟಣ ಪಂಚಾಯತಿ ಸಿಬ್ಬಂದಿ ಉಮಾಶಂಕರ್ ಮತ್ತು ಬಿಜೆಪಿ ಕಾರ್ಯಕರ್ತ ಆನಂದ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ…

ಫರ್ದಿನ್ ಬೇಗ್ ಹಲ್ಲೆಗೆ ಒಳಗಾದ ವ್ಯಕ್ತಿ. ಹಲ್ಲೆ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ..

ಸೆಲೂನ್ ನಲ್ಲಿದ್ದ ಚಾಕುವಿನಿಂದ ಹಲ್ಲೆಗೆ ಯತ್ನಿಸಿದಲ್ಲದೇ, ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಪಡಿಸಲಾಗಿದೆ. ಜೊತೆಗೆ ಜೀವ ಬೆದರಿಕೆ‌ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ನಮೂದಿಸಲಾಗಿದೆ…

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಲ್ಲೆಗೆ ಒಳಗಾದ ಫರ್ಧಿನ್ ತಂದೆಯಿಂದ ದೂರು ದಾಖಲಾಗಿದೆ…

Leave a Reply

Your email address will not be published. Required fields are marked *

error: Content is protected !!