ರೈಲ್ವೆ ಟ್ರ್ಯಾಕ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಮೂರು ಯುವಕರ ಬಲಿಯಾಗಿರುವ ಘಟನೆ ತಾಲೂಕಿನ ಸಿದ್ದೇನಾಯಕನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ.
ಉತ್ತರ ಭಾರತ ಮೂಲದ ಮೂರು ಜನ ಯುವಕರು ಸೆಲ್ಫಿ ತೆಗೆದುಕೊಳ್ಳುವಾಗ ಪ್ಯಾಸೆಂಜರ್ ರೈಲು ಬಂದಿದ್ದು, ಈ ವೇಳೆ ಆಯಾತಪ್ಪಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ…
ಮೃತರ ಹೆಸರು 1) ರಾಹುಲ್ ವಯಸ್ಸು 18 ವರ್ಷ, ಗೊರಖ್ ಪುರ್ ಉತ್ತರ ಪ್ರದೇಶ, 2)ಬಿಕೇಶ್ ವಯಸ್ಸು 20 ವರ್ಷ, ಉತ್ತರ ಪ್ರದೇಶ, 3)ಲಲ್ಲನ್ ವಯಸ್ಸು 24 ವರ್ಷ ಉತ್ತರ ಪ್ರದೇಶ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…