ನಗರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಂವಾದ ಸಭೆ ಹಾಗೂ ಸುರಕ್ಷಾ ದಿನದ ಸಲುವಾಗಿ ವಿದ್ಯುತ್ ಗ್ರಾಹಕರ ಕುಂದು – ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೆ.16ರ ಶನಿವಾರ ಮಧ್ಯಾಹ್ನ 3 ಗಂಟೆಗೆ ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ಕುಂದುಕೊರತೆ, ನ್ಯೂನತೆಗಳನ್ನು ಬಗೆಹರಿಸಿಕೊಳ್ಳಲು ಇಲಾಖೆ ಆದೇಶದ ಮೇರೆಗೆ ಪ್ರತಿ ತಿಂಗಳ 3ನೇ ಶನಿವಾರದಂದು ಸಭೆಯನ್ನು ನಡೆಸಲಾಗುತ್ತಿದೆ.
ಈ ನಿಟ್ಟಿನಲ್ಲಿ ನಗರ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ( o&M-1, o&M-2, ,ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆಯ ) ಸಾರ್ವಜನಿಕರು, ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದಾರೆ.