ಸೆ.17ರಂದು ಜೀ ಕನ್ನಡ ನ್ಯೂಸ್‌ ಕರ್ನಾಟಕ ಐಡಲ್‌ ಅವಾರ್ಡ್ಸ್‌-2025 ಪ್ರದಾನ ಕಾರ್ಯಕ್ರಮ

ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್‌ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಕರ್ನಾಟಕ ಐಡಲ್‌ ಅವಾರ್ಡ್ಸ್‌-2025 ಪ್ರದಾನ ಮಾಡುತ್ತಿದೆ.

ಇದೇ ತಿಂಗಳ 17(ಬುಧವಾರ)ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ ಕೋರಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಾಗೂ ಕನ್ನಡದ ಪ್ರಣಯ ರಾಜ ಡಾ. ಶ್ರೀನಾಥ್‌ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟರ್‌ ಕುರುಣಾ ಜೈನ್‌, ಭಾರತ ಹಾಕಿ ತಂಡದ ಮಾಜಿ ನಾಯಕ ವಿ.ಆರ್‌.ರಘುನಾಥ್‌ ಹಾಗೂ ಪ್ಯಾರಾಲಿಂಪಿಕ್ಸ್‌ನಲ್ಲಿ ಮೊದಲ ಬೆಳ್ಳಿ ಪದಕ ಗೆದ್ದ ಹೆಚ್‌.ಎನ್‌.ಗಿರೀಶ್‌ ಸೇರಿದಂತೆ ಹಲವರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಗೃಹ ಸಚಿವ ಡಾ. ಜಿ.ಪರಮೇಶ್ವರ್‌, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕೃಷಿ ಸಚಿವ ಚಲುವರಾಯಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವರು, ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಇನ್ನು ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್‌.ಕಿರಣ್‌ ಕುಮಾರ್‌, ನಟಿ ಅನು ಪ್ರಭಾಕರ್‌, ನಟ ವಿನಯ್‌ ರಾಜ್‌ಕುಮಾರ್‌, ನಟ ರಾಣ, ನಟಿ ಅದ್ವಿತಿ ಶೆಟ್ಟಿ ವೇದಿಕೆ ಮೇಲೆ ಇದ್ದು ಸಾಧಕರನ್ನು ಹುರಿದುಂಬಿಸಲಿದ್ದಾರೆ.

ಇಡೀ ಕರ್ನಾಟಕ ಐಡಲ್‌ ಅವಾರ್ಡ್ಸ್‌‌ 2025 ಪ್ರದಾನ ಕಾರ್ಯಕ್ರಮವನ್ನ ಸಂಪಾದಕರಾದ ರವಿ ಎಸ್‌. ನಡೆಸಿಕೊಡಲಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

5 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

6 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

10 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

12 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

15 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

16 hours ago