ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಕರ್ನಾಟಕ ಐಡಲ್ ಅವಾರ್ಡ್ಸ್-2025 ಪ್ರದಾನ ಮಾಡುತ್ತಿದೆ.
ಇದೇ ತಿಂಗಳ 17(ಬುಧವಾರ)ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ ಕೋರಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಾಗೂ ಕನ್ನಡದ ಪ್ರಣಯ ರಾಜ ಡಾ. ಶ್ರೀನಾಥ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಕುರುಣಾ ಜೈನ್, ಭಾರತ ಹಾಕಿ ತಂಡದ ಮಾಜಿ ನಾಯಕ ವಿ.ಆರ್.ರಘುನಾಥ್ ಹಾಗೂ ಪ್ಯಾರಾಲಿಂಪಿಕ್ಸ್‌ನಲ್ಲಿ ಮೊದಲ ಬೆಳ್ಳಿ ಪದಕ ಗೆದ್ದ ಹೆಚ್.ಎನ್.ಗಿರೀಶ್ ಸೇರಿದಂತೆ ಹಲವರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕೃಷಿ ಸಚಿವ ಚಲುವರಾಯಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವರು, ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಇನ್ನು ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ನಟಿ ಅನು ಪ್ರಭಾಕರ್, ನಟ ವಿನಯ್ ರಾಜ್‌ಕುಮಾರ್, ನಟ ರಾಣ, ನಟಿ ಅದ್ವಿತಿ ಶೆಟ್ಟಿ ವೇದಿಕೆ ಮೇಲೆ ಇದ್ದು ಸಾಧಕರನ್ನು ಹುರಿದುಂಬಿಸಲಿದ್ದಾರೆ.
ಇಡೀ ಕರ್ನಾಟಕ ಐಡಲ್ ಅವಾರ್ಡ್ಸ್ 2025 ಪ್ರದಾನ ಕಾರ್ಯಕ್ರಮವನ್ನ ಸಂಪಾದಕರಾದ ರವಿ ಎಸ್. ನಡೆಸಿಕೊಡಲಿದ್ದಾರೆ.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…