ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆಂದೋಲನದಲ್ಲಿ ಪಾಲ್ಗೊಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್- 2 ನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಚತಾ ಹೀ ಸೇವಾ (ಎಸ್.ಎಚ್.ಎಸ್-2024) ಅಭಿಯಾನವನ್ನು ಸೆಪ್ಟೆಂಬರ್-17 ರಿಂದ ಅಕ್ಟೋಬರ್ 2 ವರೆಗೆ ಸ್ವಭಾವ್ ಸ್ವಚ್ಛತಾ- ಸಂಸ್ಕಾರ್” ಎಂಬ ಧ್ಯೆಯದೊಂದಿಗೆ ಆಚರಿಸಲಾಗುತ್ತಿದೆ. ಈ ಅಭಿಯಾನವು ಸ್ವಚ್ಛತೆ ಹಾಗೂ ನೈರ್ಮಲ್ಯತೆಗಾಗಿ ಮಾಡಲಾಗುತ್ತಿದೆ.
ಈ ಅಭಿಯಾನವನ್ನು ಸಾರ್ವಜನಿಕರು ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಧಾರಣೆಗೆ ಪ್ರಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಎಲ್ಲೆಲ್ಲಿ ಕಸದ ರಾಶಿಗಳು ಇದೆ ಅವುಗಳನ್ನು ಸ್ವಚ್ಛತೆ ಮಾಡುವ ಮೂಲಕ , ನೈರ್ಮಲ್ಯ ಸಾಧಿಸಬೇಕು. ಹಾಗೆಯೇ ಸ್ವಚ್ಛತಾ ಹೀ ಸೇವಾ ಆಂದೋಲನದ ಭಾಗವಾಗಿ ಪ್ರತಿ ತಾಲ್ಲೂಕು, ನಗರಸಭೆ, ಪುರಸಭೆ, ಪ್ರತಿ ಗ್ರಾಮ ಪಂಚಾಯತಿ, ಪ್ರತಿ ಹೋಬಳಿ ಪ್ರತಿ ಗ್ರಾಮಗಳಲ್ಲಿ, ಸರ್ಕಾರದ ಎಲ್ಲಾ ಇಲಾಖೆಗಳು ಎಲ್ಲಾ ಕಚೇರಿಗಳನ್ನು ಸ್ವಚ್ಛತೆ ಮಾಡುವ ಮೂಲಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾಥ, ರ್ಯಾಲಿಗಳು, ಸ್ಪರ್ಧೆಗಳು, ಕಾರ್ಮಿಕರ ಆರೋಗ್ಯ ಶಿಬಿರ ಮುಂತಾದ ಸ್ವಚ್ಛತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಂದೋಲನದಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಬೇಕು. ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ಸಾರ್ವಜನಿಕರು, ಎಲ್ಲಾ ಅಧಿಕಾರಿಗಳು, ಎಲ್ಲಾ ಸಿಬ್ಬಂದಿಗಳು ಈ ಆಂದೋಲನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.
ಸ್ವಚ್ಛತಾ ಕಾರ್ಯಕ್ರಮಗಳು ಹಮ್ಮಿಕೊಂಡು ಕಾರ್ಯಕ್ರಮಗಳ ಪೋಟೋ, ವಿಡಿಯೋ ಗಳನ್ನು ಸ್ವಚ್ಛತಾ ಹೀ ಸೇವಾ ವೆಬ್ಸೈಟ್ https://swachhatahiseva.com ಲಿಂಕ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನ ಯಶಸ್ವಿಗೊಳಿಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಕೋರಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…