ಸೆ.20ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಸಂಪರ್ಕ ಸಭೆ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 20 ರಂದು ದೇವನಹಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ, ಜಿ.ಪಂ ಮುಖ್ಯ‌ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರ ಉಪಸ್ಥಿತಿಯಲ್ಲಿ ದೇವನಹಳ್ಳಿ ಟೌನ್, ಅಂಬೇಡ್ಕರ್ ಭವನದಲ್ಲಿ ಸೆಪ್ಟೆಂಬರ್ 20ರಂದು ಬೆಳಗ್ಗೆ 11-00 ಗಂಟೆಗೆ ಸಾರ್ವಜನಿಕ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿರುತ್ತದೆ.

ಈ ಸಭೆಯಲ್ಲಿ ದೇವನಹಳ್ಳಿ ತಾಲ್ಲೂಕಿನ ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲುಗಳನ್ನು ಆಲಿಸುವುದಲ್ಲದೇ ಸ್ಥಳದಲ್ಲಿಯೇ ಪರಿಹಾರವನ್ನು ನೀಡಲು ಕ್ರಮ ವಹಿಸಲಾಗುವುದು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಎಲ್ಲಾ ಸಾರ್ವಜನಿಕರು ತಮ್ಮ ಕುಂದು ಕೊರತೆಗಳು/ಅಹವಾಲುಗಳು ಏನಾದರು ಇದ್ದಲ್ಲಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಾರ್ವಜನಿಕ ಸಂಪರ್ಕ ಸಭೆಯನ್ನು ಯಶಸ್ವಿಗೊಳಿಸಬೇಕೆಂದು  ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *