ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 20 ರಂದು ದೇವನಹಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರ ಉಪಸ್ಥಿತಿಯಲ್ಲಿ ದೇವನಹಳ್ಳಿ ಟೌನ್, ಅಂಬೇಡ್ಕರ್ ಭವನದಲ್ಲಿ ಸೆಪ್ಟೆಂಬರ್ 20ರಂದು ಬೆಳಗ್ಗೆ 11-00 ಗಂಟೆಗೆ ಸಾರ್ವಜನಿಕ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿರುತ್ತದೆ.
ಈ ಸಭೆಯಲ್ಲಿ ದೇವನಹಳ್ಳಿ ತಾಲ್ಲೂಕಿನ ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲುಗಳನ್ನು ಆಲಿಸುವುದಲ್ಲದೇ ಸ್ಥಳದಲ್ಲಿಯೇ ಪರಿಹಾರವನ್ನು ನೀಡಲು ಕ್ರಮ ವಹಿಸಲಾಗುವುದು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಎಲ್ಲಾ ಸಾರ್ವಜನಿಕರು ತಮ್ಮ ಕುಂದು ಕೊರತೆಗಳು/ಅಹವಾಲುಗಳು ಏನಾದರು ಇದ್ದಲ್ಲಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಾರ್ವಜನಿಕ ಸಂಪರ್ಕ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…