ಸೆ.22ರಂದು ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ  ದಿನಾಚರಣೆ- 2023 ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಗುತ್ತಿದೆ.

ಪ್ರತಿ ವರ್ಷದಂತೆ ಅಕ್ಟೋಬರ್-01 ರಂದು “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2023” ಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಸೆ.22ರಂದು ಬೆಳಗ್ಗೆ-9ಕ್ಕೆ ಆಯೋಜಿಸಲಾಗಿದೆ.

ಸಾಂಸ್ಕೃತಿಕ ಸ್ಪರ್ಧೆಗಳು

60 ವರ್ಷದಿಂದ 80 ವರ್ಷ ಮೇಲ್ಪಟ್ಟ ಮಹಿಳೆಯರು, ಪುರುಷರಿಗೆ ಏಕಪಾತ್ರ ಅಭಿನಯ, ಗಾಯನ ಸ್ಫರ್ಧೆ, ಆಶುಭಾಷಣ ಸಾಂಸ್ಕೃತಿಕ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ.

ಕ್ರೀಡಾ ಸ್ಪರ್ಧೆಗಳು

60 ವರ್ಷದಿಂದ  69 ವರ್ಷದ ಪುರುಷ ಹಾಗೂ ಮಹಿಳೆಯರಿಗೆ ಒಟ, ಜಾವಲಿನ್ ಮ್ಯೂಸಿಕಲ್ ಚೇರ್ ಕ್ರೀಡೆ ಸ್ಪರ್ಧೆ, 70 ರಿಂದ 79 ವರ್ಷ, 80  ವರ್ಷ ಮೇಲ್ಪಟ್ಟ ಪುರುಷ ಮಹಿಳೆಯರಿಗೆ ನಡಿಗೆ, ರಿಂಗ್ ನ್ನು ಬಕೆಟ್ ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್ ಕ್ರೀಡಾ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ.

ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಕಡ್ಡಾಯವಾಗಿ ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗುವುದು ಹಾಗೂ ಒಬ್ಬ ವ್ಯಕ್ತಿಯು 02 ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ (02 ಕ್ರೀಡಾ ಸ್ಪರ್ಧೆಗಳಲ್ಲಿ ಆಗಬಹುದು, 02 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಆಗಬಹುದು ಅಥವಾ 01 ಕ್ರೀಡೆ ಹಾಗೂ 01 ಸಾಂಸ್ಕೃತಿಕ ಸ್ಪರ್ಧೆ ಆಗಬಹುದು)ಅಧಿಕಾರಿಗಳು ವಿಧಿಸುವ ಷರತ್ತುಗಳಿಗೆ ಬದ್ದರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ದೂರವಾಣಿ ಸಂಖ್ಯೆ 9980860605 ವಿಕಲಚೇತನರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ-080-29787441 ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ-08027622030 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

9 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

10 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

18 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

23 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago