ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ತಿಳಿಸಿದ್ದಾರೆ.

ಈ ಹಿಂದೆ ನಿಗದಿಪಡಿಸಿದ್ದ ಮಾಕಳಿ ದುರ್ಗಾ ಬೆಟ್ಟದಲ್ಲಿ ಚಾರಣಕ್ಕೆ ಬರುವ ಪ್ರವಾಸಿಗರಿಗೆ ಸಮಸ್ಯೆ ಉಂಟಾಗಬಹುಗಿದ್ದು ಆವತಿ ಬೆಟ್ಟದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಆಚರಿಸಲಾಗುತ್ತಿದ್ದು ಸೆಪ್ಟೆಂಬರ್ 28 ರಂದು ಬೆಳಿಗ್ಗೆ 6.15 ಗಂಟೆಗೆ ಈ ಆವತಿ ಬೆಟ್ಟದಲ್ಲಿ ಟ್ರೆಕ್ಕಿಂಗ್, ಸ್ವಚ್ಚತಾ ಆಂದೋಲನ, ಸಸಿ ನೆಡುವ ಮತ್ತು ನಶಾ ಮುಕ್ತ ಭಾರತ ಪ್ರತಿಜ್ಞೆ ಕಾರ್ಯಕ್ರಮದ ಮೂಲಕ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026” (ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ (AI) ಬಳಸಿ ಪ್ರವಾಸೋದ್ಯಮದ ಮರುಸೃಷ್ಟಿ) ಎಂಬ ಸಂದೇಶದೊಂದಿಗೆ ಆಚರಿಸಲಾಗುತ್ತಿದೆ.

ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ. ಕೆ ಎನ್ ಅನುರಾಧ ಅವರು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃಧಿ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

9 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

15 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

15 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

22 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

22 hours ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

1 day ago