ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬರುವ ಭಾನುವಾರ ಸೆಪ್ಟೆಂಬರ್ 27 ರಂದು ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಮಂಜುನಾಥ್ ಆರ್ ಅವರು ತಿಳಿಸಿದ್ದಾರೆ.

ಮುಷ್ಕರದ ಅವಧಿಯಲ್ಲಿ ಸಾರ್ವಜನಿಕರ ಬ್ಯಾಂಕಿಂಗ್ ವ್ಯವಹಾರಗಳಿಗೆ ಯಾವುದೇ ರೀತಿಯ ಅಡಚಣೆ ಉಂಟಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಭಾನುವಾರ ಬ್ಯಾಂಕ್ ಶಾಖೆಗಳು ಹಾಗೂ ಎಟಿಎಂಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

ಜೊತೆಗೆ ಮುಷ್ಕರದ ದಿನಗಳಲ್ಲಿಯೂ (ಸೆ.28 ರಿಂದ 30) ಎಟಿಎಂಗಳು, ಗ್ರಾಹಕ ಸೇವಾ ಕೇಂದ್ರಗಳು, ಡಿಜಿಟಲ್ ಬ್ಯಾಂಕಿಂಗ್, ಇಂಟರ್ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಲಭ್ಯವಿರಲಿವೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ,ತಮ್ಮ ಬ್ಯಾಂಕಿಂಗ್ ವ್ಯವಹಾರಗಳನ್ನು ಭಾನುವಾರವೂ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!