ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬರುವ ಭಾನುವಾರ ಸೆಪ್ಟೆಂಬರ್ 27 ರಂದು ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಮಂಜುನಾಥ್ ಆರ್ ಅವರು ತಿಳಿಸಿದ್ದಾರೆ.
ಮುಷ್ಕರದ ಅವಧಿಯಲ್ಲಿ ಸಾರ್ವಜನಿಕರ ಬ್ಯಾಂಕಿಂಗ್ ವ್ಯವಹಾರಗಳಿಗೆ ಯಾವುದೇ ರೀತಿಯ ಅಡಚಣೆ ಉಂಟಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಭಾನುವಾರ ಬ್ಯಾಂಕ್ ಶಾಖೆಗಳು ಹಾಗೂ ಎಟಿಎಂಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ಜೊತೆಗೆ ಮುಷ್ಕರದ ದಿನಗಳಲ್ಲಿಯೂ (ಸೆ.28 ರಿಂದ 30) ಎಟಿಎಂಗಳು, ಗ್ರಾಹಕ ಸೇವಾ ಕೇಂದ್ರಗಳು, ಡಿಜಿಟಲ್ ಬ್ಯಾಂಕಿಂಗ್, ಇಂಟರ್ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಲಭ್ಯವಿರಲಿವೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ,ತಮ್ಮ ಬ್ಯಾಂಕಿಂಗ್ ವ್ಯವಹಾರಗಳನ್ನು ಭಾನುವಾರವೂ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…