ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ, ಈ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.
ಸೆಪ್ಟೆಂಬರ್ 23 ನಾಲ್ಕನೇ ಶನಿವಾರವದಂದೂ ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…