ಸೆ. 30 ರ ಒಳಗಾಗಿ ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್.ಎಸ್ ಭೋಸರಾಜು ಸೂಚನೆ

ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು ಎಲೆ ಮಲ್ಲಪ್ಪ ಶೆಟ್ಟಿ ಕೆರೆ ನೀರು ಸಂಸ್ಕರಣಾ ಘಟಕಕ್ಕೆ ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, 38 ಕೆರೆಗಳಿಗೆ ಶೀಘ್ರದಲ್ಲೇ ಸಂಸ್ಕರಿಸಿದ ನೀರು ತುಂಬಿಸುವ ಕಾರ್ಯವನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಬಾಕಿ ಇರುವ ಕಾಮಗಾರಿಗಳನ್ನ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎರಡನೇ ಹಂತದ ಸಂಸ್ಕರಿಸಿದ ನೀರು ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ದಾರಿ ಮಾಡಲಿದೆ. ಇದರಿಂದ ರೈತರಿಗೆ ಬಹಳ ಉಪಯೋಗವಾಗಲಿದೆ ಎಂದು ಹೇಳಿದರು.

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರ ರೈತ ಪರ ನಿಲುವು:

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರ ರೈತ ಪರ ನಿಲುವನ್ನು ತೆಗೆದುಕೊಂಡಿದೆ. ರಾಜ್ಯ ಸರಕಾರ ತನ್ನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ದೆಹಲಿಯಲ್ಲೂ ಸಭೆ ನಡೆಸಿದ್ದಾರೆ. ಸರ್ವಪಕ್ಷಗಳ ಭೇಟಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಮಯವನ್ನು ಕೇಳಿದ್ದಾರೆ. ತಜ್ಞರು, ಹಿರಿಯ ಅಧಿಕಾರಿಗಳು ಮತ್ತು ಹಿರಿಯ ನ್ಯಾಯವಾದಿಗಳೊಂದಿಗೆ  ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ರಾಜ್ಯ ಸರಕಾರ ರೈತ ಪರ ನಿಲುವನ್ನು ತಗೆದುಕೊಳ್ಳುವಲ್ಲಿ ವಿಫಲವಾಗಿದೆ ಎನ್ನುವ ಆರೋಪ ಸತ್ಯಕ್ಕೆ ದೂರ. ರಾಜ್ಯ ಸರಕಾರ ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.

Ramesh Babu

Journalist

Recent Posts

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 hour ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

3 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

11 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

13 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

22 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago